ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾರಿಗೆ ಬಸ್ ನಿಲುಗಡೆಗೆ ಭೀಮ್ ಆರ್ಮಿಯಿಂದ ಒತ್ತಾಯ

ಬಳ್ಳಾರಿ/ ಕಂಪ್ಲಿ : ನಂ.10 ಮುದ್ದಾಪುರ ಗ್ರಾ.ಪಂ. ಯ ಯಲ್ಲಮ್ಮಕ್ಯಾಂಪ್ ಬಳಿಯಲ್ಲಿರುವ ಮುಖ್ಯರಸ್ತೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರಿಗಾಗಿ ಸಾರಿಗೆ ಬಸ್ ನಿಲ್ಲಿಸುವಂತೆ ಆಗ್ರಹಿಸಿ, ಭೀಮ್ ಆರ್ಮಿ ತಾಲೂಕು ಘಟಕದಿಂದ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ನಿಯಂತ್ರಣಾಧಿಕಾರಿ ಆದಿಶೇಷ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು.
ನಂತರ ತಾಲೂಕು ಅಧ್ಯಕ್ಷ ಎ.ಎಸ್.ಯಲ್ಲಪ್ಪ ಮಾತನಾಡಿ, ಕಂಪ್ಲಿಯಿಂದ ದ ಸುಮಾರು 3-4 ಕಿ.ಮೀಟರ್ ದೂರದಲ್ಲಿ ಡಿಪ್ಲೋಮಾ, ಹಾಸ್ಟೇಲ್ ಇದ್ದು, ಇಲ್ಲಿಗೆ ಬರಲು ದೂರವಾಗುವುದರಿಂದ ಸಾರಿಗೆ ಬಸ್ ನಿಲ್ಲಿಸುವುದಿಲ್ಲ. ದಿನನಿತ್ಯದಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಮುದ್ದಪುರ ಗ್ರಾ.ಪಂ. ಯ ಯಲ್ಲಮ್ಮ ಕ್ಯಾಂಪ್‌ನಿಂದ ಕಂಪ್ಲಿಗೆ ಬರಲು ಸರಿಯಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳು ನಿಲುಗಡೆ ಮಾಡದೇ ಇರುವುದರಿಂದ ತುಂಬ ತೊಂದರೆಯಾಗುತ್ತಿದೆ. ವಿದ್ಯಾರ್ಥಿಗಳು ಖಾಸಗಿ ವಾಹನಗಳ ಮೂಲಕ ಸಂಚರಿಸಬೇಕಾಗಿದೆ. ಇಲ್ಲಿನ ಮುಖ್ಯರಸ್ತೆಯಲ್ಲಿ ಸಾಕಷ್ಟು ಸಾರಿಗೆ ಬಸ್‌ಗಳ ಓಡಾಟ ಇದ್ದರೂ, ನಿಲ್ಲಿಸುತ್ತಿಲ್ಲ. ಆದ್ದರಿಂದ ಕೂಡಲೇ ಅಧಿಕಾರಿಗಳು ಎಚ್ಚವಹಿಸಿ, ಬಸ್ ನಿಲುಗಡೆಗೆ ಸೂಕ್ತ ಕ್ರಮವಹಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಆಕ್ಕಿ ಜಿಲಾನ, ಮರಿಯಣ್ಣ, ಬಸವರಾಜ, ಸತೀಶ, ಬಸಪ್ಪ, ಕಂಪ್ಲಿ ಬಸವರಾಜ, ಧನಂಜಯ ಸೇರಿದಂತೆ ಇತರರು ಹಾಜರಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!