ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಂಜಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪಟ್ಟಣದ ಎಂಜಲ್ಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು ಈ ಸಂದರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಎಲ್ಲಾ ಮಕ್ಕಳು ಸಕ್ರಿಯವಾಗಿ ಪಾಲ್ಗೊಂಡು ಅನೇಕ ವಿಜ್ಞಾನ ವಸ್ತುಗಳನ್ನು ತಯಾರಿಸಿಕೊಂಡು ಆಗಮಿಸಿದ್ದರು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಡಿ.ಶಿರೋಮಣಿ ಮೇಡಂ ಹಾಗೂ ಪಾಲಕರು ನೆರವೇರಿಸಿ ಕೊಡುತ್ತಾ ಮಕ್ಕಳ ಉತ್ಸಾಹ ಕಂಡು ತಮ್ಮ ಸಂತಸವನ್ನು ವ್ಯಕ್ತಪಡಿಸಿದರು ಇವರೊಂದಿಗೆ ಸಮಸ್ತ ಸಿಬ್ಬಂದಿಯವರು ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರಗು ತಂದು ಕೊಟ್ಟಿದ್ದಾರೆ ಹಾಗೂ ಎಲ್ಲಾ ವಿದ್ಯಾರ್ಥಿಗಳು ಅತೀ ಹುಮ್ಮಸ್ಸಿನಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾವು ತಂದಿರುವ ವಿಜ್ಞಾನ ವಸ್ತು ಪ್ರದರ್ಶನಗಳ ಮಾಹಿತಿಯನ್ನು ಪಾಲಕರಿಗೆ ಹಾಗೂ ಆಗಮಿಸಿದ ಅತಿಥಿಗಳಿಗೆ ವಿವರಿಸಿದರು ಈ ಸಂದರ್ಭದಲ್ಲಿ ಉಮರಾನ ಮುಜಾವರ್ ಗೌಸ್ ಬಗಲಿ ಆನಂದ್ ಚವ್ಹಾಣ ಗೀತಾ ಯಾದವ್ ರೇಖಾ ಪೂಜಾರಿ ರೇಖಾ ಪಾಟೀಲ್ ಶೋಭಾ ಚವ್ಹಾಣ ಸ್ವಾತಿ ಸುರಪುರ ಸುರೇಖಾ ಮೇಡಂ ಸಂಧ್ಯಾ ಕೊಳೇಕರ್ ಉಪಸ್ಥಿತರಿದ್ದರು.

ವರದಿ-ಅರವಿಂದ್ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ