ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಣಗಳ್ಳಿ ಗ್ರಾಮದ ದಲಿತ ಸಮುದಾಯದ ಅಂಬೇಡ್ಕರ್ ಸಮುದಾಯ ಭವನದ ಸಮೀಪ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ತಳಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.
ಈ ವೇಳೆ ಮಣಗಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಸಿದ್ದರಾಜುರವರು ಮಾತನಾಡಿ
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣ ಕಾರ್ಯವು ಬಹಳ ಗೌರವಯುತ ಕಾರ್ಯವಾಗಿದೆ.ಈ ದೇಶಕ್ಕೆ ಹಾಗೂ ದೇಶದ ಅಭಿವೃದ್ಧಿಗಾಗಿ ನೀಡಿದ ಅವರ ಕೊಡುಗೆ ಅಪಾರವಾದದ್ದು ಇದರಿಂದ ಈ ಕಾರ್ಯಕ್ಕೆ ಸರ್ವ ಜನಾಂಗವೂ ಸಹಕಾರ ನೀಡಬೇಕಾದ ಅಗತ್ಯವಿದೆ.ಈ ಪುತ್ತಳಿ ನಿರ್ಮಾಣ ಕಾರ್ಯಕ್ಕೆ ಜನಾಂಗದ ಗಣ್ಯ ವ್ಯಕ್ತಿಯೊಬ್ಬರು ಸಹಕಾರ ನೀಡುತ್ತಿರುವುದು ಶ್ಲಾಘನೀಯ ಸಣ್ಣಪುಟ್ಟ ಲೋಪದೋಷಗಳಿದ್ದರೆ ಸರಿಪಡಿಸಿಕೊಂಡು ಸಮುದಾಯದ ಜನರೆಲ್ಲರೂ ಒಗ್ಗಟ್ಟಾಗಿ ನಿಂತು,ಎಲ್ಲರ ಸಹಕಾರದೊಂದಿಗೆ ಈ ಪುತ್ತಳಿ ನಿರ್ಮಾಣ ಕಾರ್ಯವನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು.
ಇಂದಿನ ಯುವ ಪೀಳಿಗೆ ಬಾಬಾ ಸಾಹೇಬರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ,ಅವರ ತತ್ವ ಸಿದ್ಧಾಂತಗಳನ್ನು ಅನುಸರಿಸುವ ಮೂಲಕ ಮುನ್ನಡೆಯಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದರು.
ನಂತರ ಮಾತನಾಡಿದ ದಲಿತ ಮುಖಂಡ ಎಂ.ಡಿ ಮಲ್ಲಣ್ಣರವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತಕ್ಕೆ ಅಗತ್ಯವಾಗಿರುವ ಉತ್ತಮ ಸಂವಿಧಾನವನ್ನು ನೀಡಿದ ಮಹಾಪುರುಷ. ದಲಿತ,ಹಿಂದುಳಿದ,ಅಲ್ಪಸಂಖ್ಯಾತರ ಏಳಿಗೆಗಾಗಿ, ವಿಶೇಷವಾಗಿ ಮಹಿಳೆಯರ ಹಕ್ಕು ಮತ್ತು ರಕ್ಷಣೆಗಾಗಿ ಶ್ರಮಿಸಿದರು ಸಂವಿಧಾನದ ಮುಖಾಂತರ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟ ಮಹಾನ್ ಮಾನವತಾವಾದಿ ಎಂದು ತಿಳಿಸಿದರು.
ಸಂದರ್ಭದಲ್ಲಿ ಗ್ರಾಮದ ಯಜಮಾನರುಗಳಾದ ಮಹಾಲಿಂಗಯ್ಯ,ಶಿವಲಿಂಗಯ್ಯ,ಚೇತನ್ ಕುಮಾರ್, ಗಂಟಯ್ಯ,ಕೆಂಪರಾಜು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ವೆಂಕಟರಾಜ,ಮಹಾನಾಯಕ ಸೇವಾ ಸಮಿತಿಯ ಅಧ್ಯಕ್ಷರಾದ ಮಹೇಶ್ ಕುಮಾರ್ ಕಾರ್ಯದರ್ಶಿಗಳಾದ ಮಲ್ಲುಸ್ವಾಮಿ ಇನ್ನುಳಿದ ಸದಸ್ಯರು ಹಾಗೂ ಮಹಿಳೆಯರು ಗ್ರಾಮದ ಹಿರಿಯರು ಕಿರಿಯರು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್.