ಬೆಂಗಳೂರು: ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಶ್ರೀ ಡಿ ಕೆ ಶಿವಕುಮಾರ್ ಅವರು ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 118ನೇ ಜನ್ಮದಿನದ ಅಂಗವಾಗಿ ವಿಧಾನಸೌಧ ಆವರಣದ ಜಗಜೀವನ್ ರಾಮ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಡಾ ಜಿ. ಪರಮೇಶ್ವರ, ಕೆ ಎಚ್ ಮುನಿಯಪ್ಪ, ಡಾ ಎಚ್ ಸಿ ಮಹಾದೇವಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ
