ಬಳ್ಳಾರಿ / ಕಂಪ್ಲಿ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ ಮತ್ತು ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಕುರಿತಾದ ರಾಜ್ಯಮಟ್ಟದ ಮುಕ್ತ ರಸಪ್ರಶ್ನೆ ಕಾರ್ಯಕ್ರಮದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡುವ ಕಾರ್ಯಕ್ರಮ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕುರುಗೋಡು ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುಪ್ರೀತ್ ರವರು ಕಾನೂನು ಅರಿವು ಮತ್ತು ಡಾ. ಬಿ.ಆರ್. ಅಂಬೇಡ್ಕರ ಕುರಿತಾದ ರಾಜ್ಯಮಟ್ಟದ ಮುಕ್ತ ರಶಪ್ರಶ್ನೆ ಕಾರ್ಯಕ್ರಮದ ವಿವರಗಳನ್ನು ನೀಡಿ ಮಾತನಾಡಿ ವಿದ್ಯಾರ್ಥಿಗಳಿಗಾಗಿ ಈ ಕಾರ್ಯಕ್ರಮ ನಡೆಸಲಾಗುತ್ತಿದ್ದು ಇದರ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅರಿಯಲು ಮತ್ತು ಸಂವಿಧಾನ ಕುರಿತಾದ ಮಾಹಿತಿಯನ್ನು ತಿಳಿಯಲು ವಿದ್ಯಾರ್ಥಿಗಳಿಗೆ ನೆರವಾಗುತ್ತದೆ ಈ ಭಾಗದ ವಿದ್ಯಾರ್ಥಿಗಳು ಸೂಕ್ತ ಮಾಹಿತಿಯನ್ನು ಪಡೆಯುವುದರ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸೇರ್ಗಡೆಯಾಗಬೇಕೆಂದು ಇದರ ಉದ್ದೇಶ ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಭಾರ ಪ್ರಾಂಶುಪಾಲರಾದ ಡಾ. ಕೆ ಮಹೇಶ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಜ್ಮಾ ಟಿ. ಎಂ.ಆರ್, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಜೆ ಕೃಷ್ಣ ಆಂಗ್ಲ ವಿಭಾಗದ ಮುಖ್ಯಸ್ಥರಾದ ಬಾಲಾಜಿ ಎಂ.ಪಿ. ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಅನ್ನಪೂರ್ಣ ಗುಡದೂರು, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮಮತಾ ಜಿ.ಎಂ. ಗ್ರಂಥ ಪಾಲಕರಾದ ಎ.ಜೆ. ವೀರಭದ್ರಪ್ಪ ಬೋಧಕ ಮತ್ತು ಬೋಧಕ್ಕೆತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ : ಜಿಲಾನ್ ಸಾಬ್ ಬಡಿಗೇರ.
