ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ಅಭಿವೃದ್ಧಿಗೆ ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿಯಲ್ಲಿ 3 ಕೋಟಿ ಅನುದಾನ ಬಿಡುಗಡೆಯಾಗಿದ್ದು ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ಇಂದು ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆರ್.ಎಸ್ ದೊಡ್ಡಿಯಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿಗೆ ಯೋಜನೆಯಡಿಯಲ್ಲಿ ಸುಮಾರು 60 ಲಕ್ಷ ರೂ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಹನೂರು ಆರ್.ಎಸ್. ದೊಡ್ಡಿ 60ಲಕ್ಷ, ವಡ್ಡರ ದೊಡ್ಡಿ 30 ಲಕ್ಷ, ಮಾರ್ಟಳ್ಳಿ 60 ಲಕ್ಷ ವೆಚ್ಚ ರೂ.ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಗುಣಮಟ್ಟದ ಕಾಮಗಾರಿಗೆ ಒತ್ತು ನೀಡುವುದರ ಜೊತೆಗೆ ನಿಗದಿತ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದರು.
ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಮಮ್ತಾಜ್ ಬಾನು, ಉಪಾಧ್ಯಕ್ಷರಾದ ಆನಂದ್ ಕುಮಾರ್,ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ್ ಕುಮಾರ್, ಅಗಸ್ಟೀನ್ ,ರಾಯಪ್ಪನ್, ಗ್ರಾಂ. ಪಂ. ಅಧ್ಯಕ್ಷ ಇನ್ನೆಸ್ ಮುತ್ತು, ಉಪಾಧ್ಯಕ್ಷರಾದ ನದಿಯ, ಮುಖಂಡರುಗಳು ಹಾಗೂ ಕೆ.ಆರ್ ಡಿ ಎಲ್ ಎಇಇ ಚಿಕ್ಕಲಿಂಗಯ್ಯ, ಇಂಜಿನೀಯರ್ ಕಾರ್ತಿಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
