ಬಳ್ಳಾರಿ / ಕಂಪ್ಲಿ : ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಡಿಯಲ್ಲಿ ನಡೆಯುತ್ತಿರುವ ವಿನೂತನ ಕಲಾ ಮತ್ತು ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕನ್ನಡ ಹಿತರಕ್ಷಕ ಸಂಘದ ಗೌರವಧ್ಯಕ್ಷ ಕ.ಮ. ಹೇಮಯ್ಯ ಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳನ್ನು ಸಮಾಜಮುಖಿಯನ್ನಾಗಿ ಮಾಡುತ್ತದೆ. ಇದು ವಿದ್ಯಾರ್ಥಿಗಳ ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಇಂತಹ ರಾಷ್ಟ್ರೀಯ ಸೇವಾ ಯೋಜನೆ ಇಂದು ಆಚರಿಸುತ್ತಿರುವುದು ಸಂತಸದ ವಿಚಾರ ಎಂದು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾಹಿತಿ ಬಂಗಿ ದೊಡ್ಡ ಮಂಜುನಾಥ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಕಾಲೇಜಿನ ಚಟುವಟಿಕೆಗಳಿಗೆ ಸೀಮಿತವಾಗದೇ ಸಾಮಾಜಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಮಹಾಬಲೇಶ್ವರ ಹಾಗೂ ಮದ್ದಾನಪ್ಪ ವಹಿಸಿದ್ದರು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ವಿಜಯಶಂಕರ ಪ್ರಾಸ್ತಾವಿಕ ಮಾತುಗಳಾನ್ನಾಡಿದರು.
ಕಾಲೇಜಿನ ಕಾರ್ಯದರ್ಶಿ ಪ್ರಕಾಶ, ಬಂಡಿ ಬಸವರಾಜ, ಲೋಕೇಶ, ಉಪನ್ಯಾಸಕರಾದ ಲಕ್ಷ್ಮಣ್ ನಾಯಕ, ಜಡೇಪ್ಪ ಉಪನ್ಯಾಸಕರು ಸೇರಿದಂತೆ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ವರದಿ : ಜಿಲಾನ್ ಸಾಬ್ ಬಡಿಗೇರ.
