ಏಲಕ್ಕಿ ನಗರಿ ಎಂದೇ ಹೆಸರುವಾಸಿಯಾದ ಹಾವೇರಿ ಈಗ ಮದುಮಗಳಂತೆ ಶೃಂಗಾರಗೊಂಡು ನೊಡುಗರ ಮನಸ್ಸನ್ನು ಸೆಳೆಯುತ್ತಿದೆ.
ಜನವರಿ 6ರಿಂದ ಒಟ್ಟು ಮೂರು ದಿನ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇಡೀ ನಗರ ವಧುವಿನಂತೆ ಕಂಗೊಳಿಸುತ್ತಿದೆ.
ಜನವರಿ 6, 7 ಮತ್ತು 8ರಂದು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಅದ್ಧೂರಿಯಾಗಿ ಕನ್ನಡದ ಹಬ್ಬವನ್ನು ಆಚರಣೆ ಮಾಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಹಾವೇರಿಯ ಹೊರವಲಯದ ಅಜ್ಜಯ್ಯ ಗುಡಿಯ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ.
ಪ್ರಧಾನ ವೇದಿಕೆಯನ್ನು ಜರ್ಮನ್ ತಂತ್ರಜ್ಞಾನ ಬಳಸಿ ನಿರ್ಮಿಸಲಾಗಿದೆ. ಪುಸ್ತಕ ಮಳಿಗೆ ಸೇರಿದಂತೆ ವಸ್ತು ಪ್ರದರ್ಶನಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.
ಹಾವೇರಿಯಲ್ಲಿ ಜ. 6ರಿಂದ 8ರವರೆಗೆ ಮೂರು ದಿನ ಸಮ್ಮೇಳನ ನಡೆಯಲಿದ್ದು, ಇಡೀ ನಗರ ಕನ್ನಡ ಬಾವುಟ ಹಾಗೂ ಸಾಹಿತಿಗಳು, ಮಹಾಪುರುಷರ ಕಟೌಟ್‍ಗಳಿಂದ ರಾರಾಜಿಸುತ್ತಿದೆ. ಅಕ್ಷರ ಜಾತ್ರೆಗೆ ಲಕ್ಷಾಂತರ ಜನ ಭೇಟಿ .ಅವರಿಗೆ ಆತಿಥ್ಯ ಮತ್ತು ಕನ್ನಡ ಮನಸ್ಸುಗಳಿಗೆ ಮುದ ನೀಡಲು ಹಲವು ಕಾರ್ಯಕ್ರಮಗಳನ್ನು ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದೆ.
ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದ ಸ್ವರೂಪ ..
ಹುತಾತ್ಮ ಮಹದೇವ ಮೈಲಾರ ಮಹಾದ್ವಾರ ನಿಜಶರಣ ಅಂಬಿಗರ ಚೌಡಯ್ಯ ಮಂಟಪದ ಸಮೀಪ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಅರಬೈಲ್ ಶಿವರಾಮ ಹೆಬ್ಬಾರ ಅವರು ಶುಕ್ರವಾರ ಬೆಳಗ್ಗೆ 7 ಗಂಟೆಗೆ ರಾಷ್ಟ್ರಧ್ವಜಾರೋಹಣ ನೆರವೆರಿಸಿದರು. ನಾಡೋಜ ಡಾ. ಮಹೇಶ್ ಜೋಷಿ ಅವರು ಪರಿಷತ್‍ನ ಧ್ವಜಾರೋಹಣ ಮಾಡಿದ್ದಾರೆ.
ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗಯ್ಯ ಬಿ. ಹಿರೇಮಠ ನಾಡಧ್ವಜಾರೋಹಣ ಮಾಡಿ ಅಕ್ಷರ ಜಾತ್ರೆಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ನಂತರ ಬೆಳಗ್ಗೆ 7.30ಕ್ಕೆ ಸಮ್ಮೇಳನಾಧ್ಯಕ್ಷ ಪದ್ಮಶ್ರೀ ಡಾ. ದೊಡ್ಡರಂಗೇಗೌಡರನ್ನು ಭವ್ಯ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳುವ ಕಾರ್ಯಕ್ರಮವನ್ನು ಹಾವೇರಿ ನಗರ ಸಭೆ ಅಧ್ಯಕ್ಷ ಸಂಜೀವ ಕುಮಾರ ನೀಲರಗಿ ಉದ್ಘಾಟಿಸಿದ್ದಾರೆ.
ಮಾಜಿ ಸಚಿವ ಬಸವರಾಜ ಶಿವಣ್ಣ ಅಧ್ಯಕ್ಷತೆ ವಹಿಸಿ, ಇದರಲ್ಲಿ ಜಿಲ್ಲಾಕಾರಿ ರಘುನಂದನ ಮೂರ್ತಿ, ಜಿಪಂ ಸಿಇಒ ಮೊಹಮ್ಮದ್ ರೋಷನ್, ಎಸ್‍ಪಿ ಹನುಮಂತರಾಯ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು
ಹಾವೇರಿಯ ಪುರಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆ ಹೊರಟು ಬಸ್ ನಿಲ್ದಾಣ, ಆರ್‌ಟಿಒ ಕಚೇರಿ ಮಾರ್ಗವಾಗಿ ಸಮ್ಮೇಳನ ವೇದಿಕೆಯ ಸಮೀಪ ತಲುಪಿತು.
ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಂತರ ಬೆಳಗ್ಗೆ 10.30ಕ್ಕೆ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ್ದಾರೆ. ಹಾಗೂ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಕುಮಾರಸ್ವಾಮಿ, ಸಚಿವರಾದ ಸುನೀಲ್ ಕುಮಾರ್, ಬಿಸಿ ಪಾಟೀಲ್, ಬಿಸಿ ನಾಗೇಶ್, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ವಿರೂಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಪೂಜಾರ, ಶ್ರೀನಿವಾಸ ಮಾನೆ, ಪರಿಷತ್ ಸದಸ್ಯರಾದ ಸಂಕನೂರ, ಸಲೀಂ ಅಹಮದ್, ಆರ್. ಶಂಕರ್, ಪ್ರದೀಪ್ ಶೆಟ್ಟರ್ ಸೇರಿ ಹಲವು ಗಣ್ಯರು ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ ಉಪಹಾರಕ್ಕೆ ಉಪ್ಪಿಟ್ಟು, ಸಿರಾ (ಕೇಸರಿಬಾತ್) ಮತ್ತು ಬೆಲ್ಲದ ಟೀ ಮಧ್ಯಾಹ್ನದ ಊಟಕ್ಕೆ ಶೇಂಗಾ ಹೋಳಿಗೆ, ಬದನೆಕಾಯಿ ಪಲ್ಯ, ಚಪಾತಿ, ವೈಟ್ ರೈಸ್, ಸಾಂಬಾರ್, ಉಪ್ಪಿನ ಕಾಯಿ, ಶೇಂಗಾ ಚಟ್ನಿ ಮತ್ತು ಮೊಸರನ್ನ ಹಾಗೂ ರಾತ್ರಿ ಊಟಕ್ಕೆ ಹೆಸರು ಬೇಳೆ ಪಾಯಸ, ಪುಳಿಯೋಗರೆ, ವೈಟ್ ರೈಸ್, ಸಾಂಬಾರ್ ಮತ್ತು ಉಪ್ಪಿನಕಾಯಿ ನೀಡಲಾಗುವುದು.
ಹಾವೇರಿ ವರದಿಗಾರು
ಮಂಜುನಾಥ ಪಾಟೀಲ