ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪೋಷಕರಿಗೆ ಗುಡ್‌ನ್ಯೂಸ್‌ ನೀಡಿದ ರಾಜ್ಯ ಸರ್ಕಾರ, 1ನೇ ತರಗತಿ ಮಕ್ಕಳ ದಾಖಲಾತಿ ವಯೋಮಿತಿ ಸಡಿಲ

ಬೆಂಗಳೂರು: ನಿರೀಕ್ಷೆಯಂತೆಯೇ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ, ಪೋಷಕರಿಗೆ ಗುಡ್‌ ನ್ಯೂಸ್‌ ನೀಡಿದೆ. ಅದರ ಪ್ರಕಾರ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1 ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ. ಇದಕ್ಕೂ ಮುನ್ನ ರಾಜ್ಯ ಪಠ್ಯಕ್ರಮದಲ್ಲಿ 1ನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು 6 ವರ್ಷ ಆಗಿರಬೇಕಾಗಿರುವುದು ಕಡ್ಡಾಯವಾಗಿತ್ತು.

ಸಮಗ್ರ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಡೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಅದರೊಂದಿಗೆ ಶಾಲಾ ಮಕ್ಕಳ ವಯೋಮಿತಿ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.
1 ನೇ ತರಗತಿಗೆ ವಯೋಮಿತಿ ಸಡಲಿಕೆ ‌ಮಾಡುವ ಸಾಧ್ಯತೆ ಬಗ್ಗೆ ಸಾಕಷ್ಟು ವರದಿಗಳು ಬಂದಿದ್ದವು. ಈಗಾಗಲೇ ಎಸ್ಇಪಿ ಸಮಿತಿಯಿಂದ ಸರ್ಕಾರಕ್ಕೆ ವರದಿ ಕೂಡ ಸಲ್ಲಿಕೆಯಾಗಿತ್ತು. 1ನೇ ತರಗತಿಗೆ 6 ವರ್ಷ ಕಡ್ಡಾಯ ನಿಯಮದಿಂದ ವಾರ್ಷಿಕವಾಗಿ 5 ಲಕ್ಷ ಮಂದಿ ಮಕ್ಕಳಿಗೆ ಶಾಲಾ ದಾಖಲಾತಿ ಮಾಡುವ ವೇಳೆ ಸಮಸ್ಯೆ ಆಗುತ್ತಿತ್ತು ಎನ್ನಲಾಗದು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ