ಬಳ್ಳಾರಿ / ಕಂಪ್ಲಿ : ನಿವೇದಿತಾ ಆಂಗ್ಲ ಮಾಧ್ಯಮ ಶಾಲೆ ಕಂಪ್ಲಿಯಲ್ಲಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಆಚರಿಸಲಾಯಿತು.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮುಖ್ಯ ಗುರುಗಳು ಹೆಚ್. ಮರಿಯಪ್ಪ ಮಾತಾನಾಡಿ ಪ್ರತಿಯೊಬ್ಬ ತುಳಿತಕ್ಕೊಳಗಾದ ವ್ಯಕ್ತಿಯು ” ಶಿಕ್ಷಣ” “ಸಂಘಟನೆ” “ಹೋರಾಟದ” ಮೂಲಕ ತನ್ನನ್ನು ತಾನು ಬದಲಾಯಿಸಿಕೊಂಡು ಸಮಾಜದ ದುರ್ಬಲರನ್ನು ಸಬಲರನ್ನಾಗಿ ಮಾಡಬೇಕೆಂದು ಕರೆ ಕೊಟ್ಟ ಹಾಗೂ ಆರ್ಥಿಕ ಸಾಮಾಜಿಕ ಸ್ವಾತಂತ್ರ್ಯವೇ ನಿಜವಾದ ಸ್ವಾತಂತ್ರ್ಯವೆಂದು ಸಾರಿ ಹೇಳಿದ “ಭಾರತ ರತ್ನ” ಭೀಮರಾವ್ ಅಂಬೇಡ್ಕರ್ ” ಅವರ ಆದರ್ಶಗಳು ಹಾಗೂ ತತ್ವಗಳು ನಮ್ಮ ಜೀವನದ ಪಥದೀಪವಾಗಬೇಕು. ವಿಶೇಷವಾಗಿ ಯುವಕರು ಅವರ ಕೊಡುಗೆಗಳನ್ನು ಗುರುತಿಸಿ, ಅವರು ಹಾಕಿಕೊಟ್ಟಿರುವ ಸಂವಿಧಾನದ ಮಾರ್ಗದಲ್ಲಿ ನಡೆಬೇಕು. ಅಂಬೇಡ್ಕರ್ ಎಂಬ ಮಹಾನ್ ಚೇತನ ಸಂಘರ್ಷದ ಅನುಭವದಿಂದ ಹುಟ್ಟಿಕೊಂಡ ವ್ಯಕಿತ್ವ. ಅವರ ಮನಸ್ಸಿನಲ್ಲಿ ಅಂದು ಮೂಡಿದ ಸಮಾನತೆಯ ಪ್ರಜ್ಞೆ ,ಭವ್ಯ ಭಾರತಕ್ಕೆ ಬಲಿಷ್ಠ ಸಂವಿಧಾನವನ್ನು ನೀಡುವಂತೆ ಪ್ರೇರೆಪಿಸಿತು. ನಮ್ಮ ಇಂದಿನ ದಿನ ನಿತ್ಯದ ಜೀವನ ನಮ್ಮ ಸಂವಿಧಾನದ ತಳಹದಿಯ ಮೇಲೆ ನಿಂತಿದೆ. ಅಂದು ಅಂಬೇಡ್ಕರ್ ಸಮಸ್ಯೆಯ ಭಾಗವಾಗಿ, ಕಷ್ಟಕಾರ್ಪಣ್ಯಗಳನ್ನು ಎದುರಿಸಿದ್ದರಿಂದಾಗಿ ಸಮಾಜದಲ್ಲಿನ ಶೋಷಿತರ ಭವಣೆಯನ್ನು ಅರಿಯಲು ಸಾಧ್ಯವಾಯಿತು. ಅಂತಹ ಶೋಷಿತರಿಗೆ ಸಮಾಜದಲ್ಲಿ ಗೌರವಯುತವಾಗಿ ಬದುಕುವ ಪರಿಸ್ಥಿತಿಯನ್ನು ತರಲು ಪ್ರೇರೆಪಿಸಿತು ಎಂದರು.
ಈ ಸಂದರ್ಭದಲ್ಲಿ ಶಾಲೆ ಶಿಕ್ಷಕರು ಸಿಬ್ಬಂದಿ ವರ್ಗ ಮತ್ತು ಮಕ್ಕಳು ಉಪಸ್ಥಿತರಿದ್ದರು.
ವರದಿ : ಜಿಲಾನ್ ಸಾಬ್ ಬಡಿಗೇರ.
