ಯಾದಗಿರಿ : ನಗರ ಮತ್ತು ಗ್ರಾಮೀಣ ಪ್ರದೇಶಗಳ ನೀರಿನಲ್ಲಿ ಫ್ಲೋರೈಡ್ ಅಂಶ ಕಂಡು ಬರುವುದರಿಂದ ಜನರಿಗೆ ಶುದ್ಧ ಕುಡಿಯುವ ನೀರು ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ ಆದರೆ ಶುದ್ಧ ಕುಡಿಯುವ ನೀರಿನ ಘಟಕ ಕಾರ್ಯ ನಿರ್ವಹಿಸದೇ ಅಕ್ರಮಗಳ ತಾಣಗಳಾಗಿ ಮಾರ್ಪಟ್ಟಿವೆ. ಈ ಚಿತ್ರಣ ಕಂಡುಬರುವುದು ಯಾದಗಿರಿ ನಗರದ ವಾರ್ಡ್ ಸಂಖ್ಯೆ ೭ ರಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಕಳೆದ ಒಂದು ವರ್ಷದಿಂದ ಕಾರ್ಯ ನಿರ್ವಹಿಸುತ್ತಿರುವ ಘಟಕದಲ್ಲಿ ಈಗ ಖಾಸಗಿ ಖಾರ ಕುಟ್ಟುವ ಗಿರಣಿಯೊಂದು ಸದ್ದಿಲ್ಲದೇ ತಲೆಯತ್ತಿದೆ. ನೀರಿನ ಘಟಕದ ಕೊಠಡಿಯಲ್ಲಿ ಬೃಹತ್ ಖಾರ ಕುಟ್ಟುವ ಯಂತ್ರ ಕಾಣಬಹುದಾಗಿದೆ. ಸರಕಾರದ ವೆಚ್ಚದಲ್ಲಿ ನಿರ್ಮಿಸಿದ ಸುಸಜ್ಜಿತ ಮಳಿಗೆಯಲ್ಲಿ ನಗರಸಭೆ ಅಕ್ರಮಗಳಿಗೆ ಜಾಗ ಮಾಡಿಕೊಟ್ಟಿದೆಯೆಂಬ ಆರೋಪ ಕೇಳಿ ಬಂದಿದೆ.
ಯಾದಗಿರಿ ಜಿಲ್ಲೆಯ ಹಲವು ಕಡೆ ಹಳ್ಳಿಗಳಲ್ಲಿ ಕಾರ್ಯನಿರ್ವಹಿಸದ ನೀರಿನ ಘಟಕಗಳು ಕಂಡುಬರುತ್ತವೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಬೇಜವಾಬ್ದಾರತನದಿಂದ ರಿಪೇರಿ ಕೆಲಸ ಆಗದೆ ಪಾಳು ಬಿದ್ದಿವೆ ಎನ್ನಬಹುದು ಪಾಳು ಬಿದ್ದ ಘಟಕಗಳಲ್ಲಿ ಈ ರೀತಿ ಅಕ್ರಮವಾಗಿ ಖಾಸಗಿಯವರ ಆಸ್ತಿಗಳಾಗಿ ಮಾರ್ಪಡಾಗಿವೆ.
ಯಾದಗಿರಿ ಜಿಲ್ಲೆಯಲ್ಲಿ ಹಲವು ಕಡೆ ಈಗಾಗಲೇ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆಗೊಂಡು ಆರು ತಿಂಗಳು ಕಳೆದರೂ ಕಾರ್ಯ ನಿರ್ವಹಿಸುತ್ತಿಲ್ಲ. ಜಿಲ್ಲಾ ಕೇಂದ್ರದ ವಾರ್ಡಗಳಲ್ಲಿ ಪ್ರತಿನಿತ್ಯ ನೂರಾರು ಸಾರ್ವಜನಿಕರು ಬಂದು ಹೋಗುವ ಸ್ಥಳದಲ್ಲಿ ಈ ಘಟಕ ನಿಶ್ಯಬ್ಧವಾಗಿರುವುದು ಸಾರ್ವಜನಿಕ ಕೆಂಗಣ್ಣಿಗೆ ಗುರಿಯಾಗಿದೆ ಮಾನ್ಯ ಶಾಸಕರು ವೆಂಕಟರೆಡ್ಡಿ ಮುದ್ನಾಳ ಹಾಗೂ ಜಿಲ್ಲಾಧಿಕಾರಿಗಳ ಮತ್ತು ಸಂಭಂಧಿಸಿದ ಅಧಿಕಾರಿಗಳು ಇತ್ತ ಕಡೆ ಗಮನಹರಿಸಬೇಕು ಎಂದು ಸ್ಥಳೀಯರ ಮನವಿ.ಯಾದಗಿರಿ ಜಿಲ್ಲೆಯ ಹಳ್ಳಿಗಳಲ್ಲಿ ಕೆಟ್ಟು ನಿಂತಿರುವ ನೀರಿನ ಘಟಕಗಳನ್ನು ರಿಪೇರಿ ಮಾಡುವ ಕೆಲಸ ಕೂಡಾ ಆಗುತ್ತಿಲ್ಲ ಹಳ್ಳಿಗಳಲ್ಲಿ ಸ್ಥಾಪಿಸಿರುವ ನೀರಿನ ಘಟಕದ ಸುತ್ತಲೂ ಜಾಲಿಗಿಡಗಳು ಬೆಳೆದು ನಿಂತಿರುವುದನ್ನು ಕಾಣಬಹುದು ಶುದ್ಧ ಕುಡಿಯುವ ನೀರಿಗಾಗಿ ಜನರು ಅಕ್ಕಪಕ್ಕದ ಹ್ಯಾಂಡ್ ಪಂಪ್ ಗಳಿಂದ ಫ್ಲೋರೈಡ್ ಮಿಶ್ರಿತ ನೀರು ತರಬೇಕಾದ ಅನಿವಾರ್ಯತೆ ಎದುರಾಗಿದೆ.
ಇದಲ್ಲದೆ ನಗರದ ವಾರ್ಡ್ 7 ಸೇರಿದಂತೆ ಇತರ ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ತಿಳಿದು ಬಂದಿದ್ದು, ವಾರ್ಡ್ ನಂಬರ್ ೭ ರಲ್ಲಿನ ನಾಗರಿಕರು ಹಾಗೂ ಸ್ಥಳೀಯರು ಅಧಿಕಾರಿಗಳು ವಿರುದ್ಧ ಶಾಪ್ ಹಾಕುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಘಟಕಗಳನ್ನು ಕಾಲ ಕಾಲಕ್ಕೆ ರಿಪೇರಿ ಮಾಡುತ್ತ ಸರಿಯಾಗಿ ನಿರ್ವಹಣೆ ಮಾಡಬೇಕಿದೆ ಎಂದು ಹೆಸರು ಹೇಳಲು ಇಚ್ಚಿಸದ ನಗರದ ನಿವಾಸಿ ಒಬ್ಬರು ಹೇಳುತ್ತಾರೆ.
ವರದಿ ರಾಜಶೇಖರ ಮಾಲಿ ಪಾಟೀಲ ಶಹಾಪುರ