ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಠ ಪರಂಪರೆಯೊಂದಿಗೆ ಒಡನಾಟ ಹೊಂದಬೇಕು : ಶಶಿಧರ ಮೇಟಿ

ಬಳ್ಳಾರಿ / ಕಂಪ್ಲಿ : ಪ್ರಸ್ತುತ ದಿನಮಾನಗಳಲ್ಲಿ ಮಾನವೀಯ ಮೌಲ್ಯಗಳು ಕಣ್ಮರೆಯಾಗುತ್ತಿದ್ದು, ಪ್ರತಿಯೊಬ್ಬರೂ ಮಾನವೀಯ ನೆಲೆಗಟ್ಟಿನಲ್ಲಿ ಬದುಕನ್ನು ರೂಪಿಸಿಕೊಳ್ಳಲು ಮಠಗಳ ಪರಂಪರೆಯೊಂದಿಗೆ ಒಡನಾಟಗಳನ್ನು ಹೊಂದಬೇಕೆಂದು ಜಿಲ್ಲೆಯ ಹಿರಿಯ ಪತ್ರಕರ್ತರಾದ ಶಶಿಧರ ಮೇಟಿ ತಿಳಿಸಿದರು.
ಅವರು ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರು ಹಂಪಿ ಸಾವಿರದೇವರು ಮಹಾಂತ ಮಠದಲ್ಲಿ ಶ್ರೀಮಠದ ಸದ್ಭಕ್ತರು ಆಯೋಜಿಸಿದ್ದ ಶ್ರೀಮಠದ ಪೀಠಾಧಿಪತಿಗಳಾದ ವಾಮದೇವ ಶಿವಾಚಾರ್ಯ ಶ್ರೀಗಳ 53ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿ ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ,ಸಂಸ್ಕಾರದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಲು ಗುರು ಮತ್ತು ಮಠಗಳ ಪರಂಪರೆಯ ಒಡನಾಟವನ್ನು ಹೊಂದಬೇಕು ಎಂದರು.
ಸಕಲ ಸದ್ಭಕ್ತರಿಂದ ತಮ್ಮ ಜನ್ಮ ದಿನದ ಗೌರವ ಸಮರ್ಪಣೆಯನ್ನು ಸ್ವೀಕರಿಸಿ ಶುಭ ಆರ್ಶೀವಚನ ನೀಡಿದ ವಾಮದೇವ ಮಹಾಂತ ಶಿವಾಚಾರ್ಯರು ತನು, ಮನ ಶುದ್ಧವಾಗಿರಲಿ, ಪ್ರತಿಯೊಬ್ಬರೂ ತಮ್ಮೊಳಗಿನ ದುರ್ಗುಣಗಳನ್ನು ದೂರ ಮಾಡಿ ಸದ್ಗುಣಗಳನ್ನು ಬೆಳೆಸಿಕೊಂಡು ಸಮಾಜದಲ್ಲಿ ತಮ್ಮ ಜೀವನದ ಸಾರ್ಥಕತೆಯನ್ನು ಪಡೆದುಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಕಂಪ್ಲಿಯ ಕೆ. ಎಂ. ಹೇಮಯ್ಯಸ್ವಾಮಿ, ಚಂದ್ರಶೇಖರಗೌಡ, ಕುರೇಕುಪ್ಪ ಶರಣಪ್ಪ, ಚಿತ್ರದುರ್ಗದ ಹಾಸ್ಯ ಕವಿ ಜಗನ್ನಾಥ್ ಸೇರಿದಂತೆ ಇತರರು ಮಾತನಾಡಿದರು.
ಸಿಂಧನೂರಿನ ಸೋಮನಾಥ ಶಿವಾಚಾರ್ಯರು, ಹರಗಿನಡೋಣಿಯ ಅಭಿನವ ಸಿದ್ಧಲಿಂಗ ಶಿವಾಚಾರ್ಯರು, ಮಸ್ಕಿಯ ಹೊರ ರುದ್ರಮನಿ ಶಿವಾಚಾರ್ಯರು, ಗೊರೆಬಾಳದ ಚನ್ನಪ್ಪ ತಾತಾ, ಎಚ್.ವೀರಾಪುರದ ಜಡೇಶ ತಾತನವರು ಶುಭ ಆರ್ಶೀವಚನ ನೀಡಿದರು.
ವಾಮದೇವ ಶಿವಾಚಾರ್ಯ ಶ್ರೀಗಳನ್ನು ಜಿ.ಚಂದ್ರಶೇಖರಗೌಡ, ಗುತ್ತಿಗೆದಾರ ಸಿದ್ದರಾಮನಗೌಡ, ಸಾಲಿ ಬಸವರಾಜ ಸ್ವಾಮಿ, ಕೆ.ಎಂ.ಹೇಮಯ್ಯಸ್ವಾಮಿ, ಕಂಪ್ಲಿಯ ಅಕ್ಕಮಹಾದೇವಿ ಮಹಿಳಾ ಮಂಡಳಿಯ ಪದಾಧಿಕಾರಿಗಳು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಪದಾಧಿಕಾರಿಗಳು,ಗುತ್ತಿಗನೂರು, ಬಾದನಹಟ್ಟಿ, ಎಚ್.ವೀರಾಪುರ, ಕುರೆಕುಪ್ಪ, ಬಳ್ಳಾರಿ, ಸಿರಗುಪ್ಪ ಸೇರಿದಂತೆ ವಿವಿಧ ಗ್ರಾಮಗಳ ಸದ್ಭಕ್ತರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ