ಬಳ್ಳಾರಿ / ಕಂಪ್ಲಿ : ಇಂದು ದಿನಾಂಕ 20-04-2025 ಭಾನುವಾರ ಬೆಳಗ್ಗೆ 10:30ಕ್ಕೆ ನಡೆಯಲಿದೆ, ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯ ಘಟಕದ ವಾರ್ಷಿಕ ಸರ್ವ ಸದಸ್ಯರ ಸಭೆ ಮತ್ತು ವಿಶೇಷ ಸರ್ವ ಸದಸ್ಯರ ಸಭೆಯು ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ನಂದಿಹಳ್ಳಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ರಾಜ್ಯ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು ಹಾಗೂ ಎಲ್ಲಾ ಪದಾಧಿಕಾರಿಗಳು ತಪ್ಪದೇ ಆಗಮಿಸಿ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಕಂಪ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತನ ಅಧ್ಯಕ್ಷರಾದ ಷಣ್ಮುಖಪ್ಪ ಚಿತ್ರಗಾರರವರು ಕರೆ ನೀಡಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್.
