
ಬಳ್ಳಾರಿ / ಕಂಪ್ಲಿ :
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮತ್ತು ಈ ದಾಳಿಯಲ್ಲಿ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಕಂಪ್ಲಿ ವಿಧಾನಸಭಾ ಕ್ಷೇತ್ರದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ವತಿಯಿಂದ ನಿನ್ನೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಶೋಕ ಆಚರಣೆ ಕಾರ್ಯಕ್ರಮ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ದೌರ್ಜನ್ಯವನ್ನು ಖಂಡಿಸಿ, ಶಾಂತಿಯುತ ಮತ್ತು ಸಮಗ್ರ ಸಮಾಜದ ಪರವಾಗಿ ಬಲವಾದ ಸಂದೇಶ ನೀಡುವ ಉದ್ದೇಶವಿದೆ ಎಂದು ಎಸ್.ಡಿ.ಪಿ.ಐ ಅಧ್ಯಕ್ಷ ರಫೀಕ್ ತಿಳಿಸಿದ್ದಾರೆ. ಕಾರ್ಯಕ್ರಮಕ್ಕೆ ಸಾರ್ವಜನಿಕರ ಸಹಭಾಗಿತ್ವವೂ ನಿರೀಕ್ಷಿಸಲಾಗಿದೆ. ಸ್ಥಳೀಯ ಆಡಳಿತ ಮತ್ತು ಪೊಲೀಸ್ ಇಲಾಖೆಗೆ ಬಂದೋಬಸ್ತ್ ನೀಡುವಂತೆ ಮನವಿ ಸಲ್ಲಿಸಲಾಗಿದೆ.
ವರದಿ : ಜಿಲಾನಸಾಬ್ ಬಡಿಗೇರ್.
