
ಮಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ :ಸಭಾಧ್ಯಕ್ಷ ಯು.ಟಿ.ಖಾದರ್ ಸಂತಾಪ, ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಿಗರಿಗಾಗಿ ತುರ್ತು ಸಹಾಯವಾಣಿ ತೆರೆಯಲು ಸೂಚನೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಪ್ರವಾಸಿಗರ ನರಮೇಧ ಅತ್ಯಂತ ಹೇಯ ಕೃತ್ಯ. ಇದು ದೇಶದ ಪ್ರತಿಯೊಬ್ಬರಿಗೂ ಅತ್ಯಂತ ನೋವಿನ ಸಂಗತಿ. ಉಗ್ರರ ಕ್ರೌರ್ಯಕ್ಕೆ ಬಲಿಯಾದ ಪ್ರವಾಸಿಗರಿಗೆ ಸಭಾಧ್ಯಕ್ಷ ಯು. ಟಿ. ಖಾದರ್ ಸಂತಾಪ ತಿಳಸಿದ್ದಾರೆ .
ಈ ಪೈಕಿ ನಮ್ಮ ಕರ್ನಾಟಕದ ಇಬ್ಬರು ಬಲಿಯಾಗಿರುವುದು ಅತ್ಯಂತ ದುಃಖದ ವಿಚಾರ. ಮೃತರ ಕುಟುಂಬಕ್ಕೆ ಸಾಂತ್ವನಗಳನ್ನು ಸಲ್ಲಿಸುತ್ತಾ, ದುಃಖವನ್ನು ಭರಿಸುವ ಶಕ್ತಿ ಆ ಭಗವಂತ ಕುಟುಂಬಕ್ಕೆ ನೀಡಲಿ, ಕಣಿವೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಲಿ, ಅಲ್ಲಿ ಸಿಲುಕಿರುವ ಪ್ರವಾಸಿಗರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಯು ಟಿ ಖಾದರ್ ತಿಳಿಸಿದರು.
ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಯಾರಾದರೂ ಕಾಶ್ಮೀರ ಪ್ರವಾಸಕ್ಕಾಗಿ ತೆರಳಿದ್ದರೆ ಅವರ ರಕ್ಷಣೆಗಾಗಿ ತುರ್ತು ಸಹಾಯವಾಣಿ ತೆರೆಯಲು ಜಿಲ್ಲಾಧಿಕಾರಿಗಳಿಗೆ ಯು. ಟಿ. ಖಾದರ್ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಅಗತ್ಯ ಬಿದ್ದರೆ ತುರ್ತು ಸಹಾಯವಾಣಿಯನ್ನು ಸಂಪರ್ಕಿಸಬಹುದು, ಅಲ್ಲದೆ ಸಭಾಧ್ಯಕ್ಷರ ಮಂಗಳೂರು ಕಚೇರಿಯನ್ನು ಈ ಕೆಳಗಿನ ದೂರವಾಣಿ ನಂಬರ್ ಮೂಲಕ ಸಂಪರ್ಕಿಸಬಹುದು.
+91 7204440444
+91 7026991111
ಎಂದು ಸಭಾಧ್ಯಕ್ಷರ ಕಚೇರಿ ಪ್ರಕಟಣೆ ತಿಳಿಸಿದೆ.
ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ
