ಬಳ್ಳಾರಿ : 2025 26 ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು ಯೋಜನೆ ಅಡಿ ಸಾಲ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತರ ( ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ಧರು, ಸಿಖ್ಕರು ಹಾಗೂ ಪಾರ್ಸಿಗಳು) ನಿಗದಿತ ನಮೂನೆಯಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ( ಸಿಇಟಿ/ ನೀಟ್ ) ನಲ್ಲಿ ಆಯ್ಕೆಯಾಗುವ ವೈದ್ಯಕೀಯ ಎಂಬಿಬಿಎಸ್ ಹಾಗೂ ದಂತ ವೈದ್ಯಕೀಯ ( ಬಿಡಿಎಸ್ ) ಹಾಗೂ ಬಿಇ, ಬಿಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್, ಬಿ ಆಯುಷ್, ಪಾರ್ಮಾಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಇಂತಹ ಕೋರ್ಸುಗಳಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬೆಸೈಟ್ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ ಏಪ್ರಿಲ್ 23ರಿಂದ ಮೇ 23ರ ಒಳಗಾಗಿ ಅರ್ಜಿ ಸಲ್ಲಿಸಬೇಕು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮೌಲಾನ ಆಜಾದ್ ಭವನ, 1ನೇ ಮಹಡಿ ಮುಸ್ಲಿಂ ಶಾದಿ ಮಹಲ್ ಪಕ್ಕದಲ್ಲಿ, ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ, ಬಳ್ಳಾರಿ ದೂರವಾಣಿ ಸಂಖ್ಯೆ : 08392 – 294370 ಇವರನ್ನು ಸಂಪರ್ಕಿಸಲು ಕರ್ನಾಟಕ ಅಲ್ಪಸಂಖ್ಯಾತರ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಜಿಲಾನಸಾಬ್ ಬಡಿಗೇರ್.
