ಶಾಲೆಗೆ ಫೋನ್ ನೋ ಎಂಟ್ರಿ ಎಂದ ಶಿಕ್ಷಕಿಗೆ ಚಪ್ಪಲಿಯಲ್ಲಿ ಕಪಾಳಮೋಕ್ಷ ಮಾಡಿದ ವಿದ್ಯಾರ್ಥಿನಿ…!
ಆಂಧ್ರಪ್ರದೇಶ: ಮಕ್ಕಳಿಗೆ ವಿದ್ಯೆ ಕಲಿಸಿ, ಬದುಕಿನ ಮಾರ್ಗ ತೋರಿಸುವ ಶಿಕ್ಷಕನ್ನು ದೇವರೆಂದು ಗೌರವಿಸಲಾಗುತ್ತದೆ, ಆದರೆ ಇಲ್ಲೊಬ್ಬಳು ವಿದ್ಯಾರ್ಥಿನಿ ತನ್ನ ಚಪ್ಪಲಿಯಲ್ಲೇ ತನ್ನ ಗುರುವಿಗೆ ಕಪಾಳಮೋಕ್ಷ ಮಾಡಿದ್ದಾಳೆ.
ಈ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ರಘು ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.
ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ವಿದ್ಯಾರ್ಥಿನಿ ತರಗತಿಯಲ್ಲಿ ಫೋನಿನಲ್ಲಿ ಮಾತನಾಡುತ್ತಿದ್ದನ್ನು ಕಂಡ ಶಿಕ್ಷಕಿ ಆಕೆಯಿಂದ ಫೋನ್ ಕಸಿದುಕೊಂಡಿದ್ದಾರೆ.
ಇದರಿಂದ ಕೋಪಗೊಂಡ ವಿದ್ಯಾರ್ಥಿನಿ ನೇರವಾಗಿ ತನ್ನ ಶಿಕ್ಷಕಿಯ ಮೇಲೆಯೇ ಕೈ ಮಾಡಿದ್ದಾಳೆ.
ಕಾಲೇಜಿನ ಕ್ಯಾಂಪಸ್ ನಲ್ಲೇ ನೂರಾರು ವಿದ್ಯಾರ್ಥಿಗಳ ಮುಂದೆ ಶಿಕ್ಷಕಿಗೆ ಚಪ್ಪಲಿಯಲ್ಲಿ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಇದಲ್ಲದೇ ಶಿಕ್ಷಕಿಗೆ ಅವಾಚ್ಯ ಶಬ್ದಗಳಿಂದ ಶಬ್ದಗಳಿಂದ ಬೈಯುತ್ತಿರುವುದನ್ನು ಕಾಣಬಹುದು.
@DrSrinubabu ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ.
ವರದಿ : ಜಿಲಾನಸಾಬ್ ಬಡಿಗೇರ್.
