ತುಮಕೂರು/ ಪಾವಗಡ: ಮೊದಲ ಬಾರಿ ಅದ್ದೂರಿಯಾಗಿ ಅಂಬೇಡ್ಕರ್ ಜಯಂತಿಯನ್ನು ಅಚರಿಸಿದ ಕುಣಿಹಳ್ಳಿ ಗ್ರಾಮಸ್ಥರು.
ಕಾರ್ಯಕ್ರಮದಲ್ಲಿ ಭಾಗಿಯಾದ ಮಾಜಿ ಶಾಸಕರಾದ ಕೆ. ಎಂ. ತಿಮ್ಮರಾಯಪ್ಪ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಹೋಬಳಿಯ ಕುಣಿಹಳ್ಳಿ ಗ್ರಾಮದಲ್ಲಿ ಮೊದಲ ಬಾರಿ ಅಂಬೇಡ್ಕರ್ ರವರ 134 ನೇ ಜಯಂತಿಯನ್ನು ಗ್ರಾಮದ ಮಹಿಳೆಯರು ಮತ್ತು ಯುವಕರು ಕಳಶ ಕುಂಭಗಳೊಂದಿಗೆ ಗ್ರಾಮದಲ್ಲಿ ಮೆರವಣಿಗೆ ಮಾಡಿ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಿದರು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾಜಿ ಶಾಸಕರಾದ ಕೆ. ಎಂ. ತಿಮ್ಮರಾಯಪ್ಪ ನವರು ಕಾರ್ಯಕ್ರಮವನ್ನು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅಂಬೇಡ್ಕರ್ ರವರು ಬಾಲ್ಯದಲ್ಲಿ ಯಾವ ರೀತಿ ಕಷ್ಟಪಟ್ಟು ಓದಿ ಅವರು ಸಂವಿಧಾನವನ್ನು ರಚಿಸುವ ಮಟ್ಟಕ್ಕೆ ಬೆಳೆದರೆಂದು ಮಾಹಿತಿಯನ್ನು ತಿಳಿಸುತ್ತಾ ಮಕ್ಕಳು ಜೀವನದಲ್ಲಿ ಅವರ ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಣ ಮುಖ್ಯ ಆದ್ದರಿಂದ ನಮಗೆ ಎಷ್ಟೇ ಕಷ್ಟ ಇದ್ದರೂ ಮಕ್ಕಳಿಗೆ ಉತ್ತಮ ಗುಣಮಟ್ಟದ ವಿದ್ಯಾಬ್ಯಾಸ ಕೊಡಿಸಬೇಕು ಎಂದು ಹೇಳಿದರು.
ನಂತರ ಮಾತನಾಡಿದ ಡಾ. ಕುಮಾರ್ ರವರು ಮಕ್ಕಳು ಜೀವನದಲ್ಲಿ ಏನಾದರೂ ಸಾಧಿಸಬೇಕು ಎಂದರೆ ಮೊದಲು ಗುರಿ ಇರಬೇಕು ಗುರಿ ಇಲ್ಲದಿದ್ದರೆ ಜೀವನದಲ್ಲಿ ಏನು ಸಾಧಿಸಲು ಸಾಧ್ಯವಾಗುವುದಿಲ್ಲ ಮತ್ತು ಯುವಕರು ದುಷ್ಟ ಚಟಗಳಿಂದ ದೂರವಿರಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಯುವ ಮುಖಂಡರಾದ ಮಂಜು, ಬಿ. ಹೊಸಹಳ್ಳಿ ಮಲ್ಲಿಕಾರ್ಜುನ, ಮಾರಪ್ಪ ಊರಿನ ಮುಖಂಡರು ಯುವಕರು ಮಹಿಳೆಯರು ಭಾಗವಹಿಸಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಿದರು.
- ಪೃಥ್ವಿರಾಜು ಜಿ. ವಿ
