ಸ್ವಾಮಿ ವಿವೇಕಾನಂದರ ಜನ್ಮದಿನ ಅಂಗವಾಗಿ ಕೇಂದ್ರ ಯುವಜನ ಸೇವೆ ಮತ್ತು ಕ್ರೀಡಾ ಸಚಿವಾಲಯ ಕಳೆದ 25 ವರ್ಷಗಳಿಂದ ರಾಷ್ಟ್ರೀಯ ಯುವಜನೋತ್ಸವ ನಡೆಸಿಕೊಂಡು ಬರುತ್ತಿದ್ದು,
ಕರ್ನಾಟಕದಲ್ಲಿ ಸುಮಾರು 12 ವರ್ಷಗಳ ಬಳಿಕ ನಡೆಯುತ್ತಿರುವ ರಾಷ್ಟ್ರೀಯ ಯುವ ಜನೋತ್ಸವ ಇಂದು ಹುಬ್ಬಳ್ಳಿಯ ರೈಲ್ವೆ ಕ್ರೀಡಾಂಗಣದಲ್ಲಿ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಅಮೃತ ಹಸ್ತದಿಂದ ಚಾಲನೆ ನೀಡಲಾಯಿತು, ಇದಕ್ಕೆ ಹುಬ್ಬಳ್ಳಿಯ ರೈಲ್ವೆ ಮೈದಾನ ನವನವೀನವಾಗಿ ಸಿಂಗಾರಗೊಂಡಿದೆ, ಕಾರ್ಯಕ್ರಮದ ಉದ್ಘಾಟನೆ ಹುಬ್ಬಳ್ಳಿಯಲ್ಲಿ ನಡೆಯುತ್ತಿದ್ದು, ಬಾಕಿ ಉಳಿದ ಕಾರ್ಯಕ್ರಮಗಳು ಧಾರವಾಡದಲ್ಲಿ ನಡೆಯಲಿವೆ
