ಬಳ್ಳಾರಿ / ತೋರಣಗಲ್ಲು : ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ರವರು ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಶ್ರೀ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮ ಪಾಲ್ಗೊಳ್ಳಲು, ಟೆಕ್ನಿಕಲ್ ಹಾಲ್ಟ್ ಸಲುವಾಗಿ ಇಂದು ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಜೆ.ಎಸ್.ಡಬ್ಲೂ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ದಿನಾಂಕ 20-05-2025 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಜರುಗಲಿರುವ ಸರ್ಕಾರದ ಸಾಧನೆ ಸಮಾವೇಶದ ಬಗ್ಗೆ ವಿವರವಾಗಿ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಗ್ರಾಮಾಂತರ ಶಾಸಕರು ಹಾಗೂ ಮಾಜಿ ಸಚಿವರಾದ ಬಿ. ನಾಗೇಂದ್ರ, ಮಾಜಿ ಶಾಸಕರು ಮತ್ತು ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಿರಾಜ್ ಶೇಖ್
ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಕೆ ಎಂ ಹಾಲಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀ ಕೆ. ಎಸ್. ಎಲ್ ಸ್ವಾಮಿ, ಬಳ್ಳಾರಿ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ಬೆಣಕಲ್ ಬಸವರಾಜ ಮತ್ತಿತರರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್
