ಚಾಮರಾಜನಗರ/ ಗುಂಡ್ಲುಪೇಟೆ :
ಕರ್ನಾಟಕ ಕಾವಲು ಪಡೆಯ ವತಿಯಿಂದ ಸಿಹಿ ವಿತರಿಸುವ ಮೂಲಕ ಕಾರ್ಮಿಕ ದಿನಾಚರಣೆ ಆಚರಿಸಲಾಯಿತು. ಇದರ ಅಂಗವಾಗಿ ಗುಂಡ್ಲುಪೇಟೆ ಪಟ್ಟಣದ ಪುರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಪೌರ ಕಾರ್ಮಿಕರಾದ ಮುತ್ತಮ್ಮ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್ ಮಾತನಾಡಿ ಪೌರ ಕಾರ್ಮಿಕರ ದಿನಾಚರಣೆಯಂದು ಇಂತಹ ಹಿರಿಯ ಪೌರ ಕಾರ್ಮಿಕರಿಗೆ ಗೌರವಿಸುತ್ತಿರುವುದು ಸಂತಸದ ಸಂಗತಿ ಇಂತಹ ಹಿರಿಯರನ್ನು ಪ್ರತಿಯೊಬ್ಬರೂ ಗುರುತಿಸಿ ಗೌರವಿಸಬೇಕೆಂದು ತಿಳಿಸಿದರು. ಇದೇ ವೇಳೆ ಕನ್ನಡಪರ, ಹಿರಿಯ ಹೋರಾಟಗಾರರಾದ ಬ್ರಹ್ಮಾನಂದ್ ಮಾತನಾಡಿ ಕಾವಲು ಪಡೆಯ ಕಾರ್ಯವೈಖರಿಯನ್ನು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದ ನಿರೂಪಣೆಯನ್ನು ಕಾರ್ಯದರ್ಶಿ ಎಸ್. ಮುಬಾರಕ್ ನೆರವೇರಿಸಿದರು. ಜಿಲ್ಲಾ ಕಾರ್ಯಧ್ಯಕ್ಷರಾದ ಅಬ್ದುಲ್ ರಷೀದ್, ತಾಲ್ಲೂಕು ಗೌರವಾಧ್ಯಕ್ಷರಾದ ರಾಮೇಗೌಡ, ತಾಲ್ಲೂಕು ಸಂಚಾಲಕರಾದ ಮಾಶ್ಟರ್ ಮಲ್ಲಯ್ಯ, ತಾಲ್ಲೂಕು ಘಟಕದ ಬೆಂಡರವಾಡಿ ಚಿನ್ನಸ್ವಾಮಿ, ಟೌನ್ ಉಪಾಧ್ಯಕ್ಷರಾದ ಸಾದಿಕ್ ಪಾಷ, ಟೌನ್ ಗೌರವಾಧ್ಯಕ್ಷರಾದ ಶಕೀಲ್, ಟೌನ್ ಯುವ ಘಟಕದ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್, ಟೌನ್ ಸಂಚಾಲಕರಾದ ಮಿಮಿಕ್ರಿರಾಜು, ಪವನ್ ಡ್ಯಾನ್ಸರ್, ರಾಜೇಶ್, ಜೀವಿಕ ಶಿವು, ಅಬ್ದುಲ್ ರಾಜಿಕ್, ಮೂರ್ತಿ ಸೇರಿದಂತೆ ಪುರಸಭೆಯ ಸಿಬ್ಬಂದಿ ವರ್ಗದವರು ಹಾಗೂ ಪೌರ ಕಾರ್ಮಿಕರು ಹಾಜರಿದ್ದರು.
ವರದಿ ಗುಂಡ್ಲುಪೇಟೆ ಕುಮಾರ್
