ಬೆಂಗಳೂರು: ಕಾರ್ಮಿಕರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ
ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಶ್ರೀ ಡಿ ಕೆ ಶಿವಕುಮಾರ್ ಅವರು 12,692 ಮಂದಿ ಪೌರ ಕಾರ್ಮಿಕರಿಗೆ ‘ಸೇವೆ ಖಾಯಂ ನೇಮಕಾತಿ ಪತ್ರ’ ವಿತರಣೆ ಮಾಡಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ
ರಣದೀಪ್ ಸಿಂಗ್ ಸುರ್ಜಿವಾಲ್, ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ, ಕೃಷ್ಣ ಬೈರೇ ಗೌಡ, ರಹೀಮ್ ಖಾನ್, ಕೆ ಎಚ್ ಮುನಿಯಪ್ಪ, ಡಾ. ಎಚ್ ಸಿ ಮಹಾದೇವಪ್ಪ, ಬೈರತಿ ಸುರೇಶ್, ಶಾಸಕರಾದ ರಿಜವಾನ್ ಅರ್ಷಾದ್, ಎಸ್.ಟಿ. ಆನೇಕಲ್ ಶಿವಣ್ಣ, ಎಂ.ಸಿ. ಶ್ರೀನಿವಾಸ್, ಎಂ ಎಲ್ ಸಿ ಎಸ್ ರವಿ, ಯು.ಬಿ. ವೆಂಕಟೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಬೆಂಗಳೂರು.
