ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜಾರೋಷ ಪಡಿತರ ಅಕ್ಕಿ ಅಕ್ರಮ ಮಾರಾಟ ; ಭೀಮ ಆರ್ಮಿ ಬೃಹತ್ ಪ್ರತಿಭಟನಾ ಮೆರವಣಿಗೆ

ಗದಗ :ಪಡಿತರ ಅಕ್ಕಿಯನ್ನು ಅತ್ಯಂತ ಕಡಿಮೆ ಬೆಲೆಗೆ ಖರೀದಿಸಿ ಅಕ್ರಮವಾಗಿ ಸಾಗಣೆ ಮಾಡುವ ಜಾಲ ದಿನೇ ದಿನೇ ವಿಸ್ತರಿಸುತ್ತಾ ಸಾಗಿದೆ. ಬಡವರ ಅನ್ನ ಭಾಗ್ಯವನ್ನು ಕಸಿದುಕೊಳ್ಳುವರ ವಿರುದ್ಧ ದಿಟ್ಟ ಕ್ರಮವನ್ನು ತೆಗೆದುಕೊಳ್ಳಲು ಪೊಲೀಸರು ಮುಂದಾಗುತ್ತಿಲ್ಲ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ರಾಜಾರೋಷವಾಗಿ ಆಹಾರ ಸಾಗಣೆಯ ಮಾಫಿಯಾ ಸದ್ದು ಜೋರಾಗಿ ಕೇಳಿ ಬರುತ್ತಲಿದೆ ಎಂದು ಭೀಮ ಆರ್ಮಿ ಜಿಲ್ಲಾಧ್ಯಕ್ಷ ಗೋಪಾಲ‌ ಕೋಣೆಮನಿ ನೇತೃತ್ವದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ಗದಗ ನಗರದ ಎಸ್.ಎಂ ಕೃಷ್ಣ ನಗರ, ಶಹಪುರ ಪೇಟೆ, ವಕ್ಕಲಗೇರಿ, ಗಂಗಿಮಡಿ, ಅಂಬೇಡ್ಕರ್ ನಗರ, ಜವಳಗಲ್ಲಿ, ಮಕಾನಗಲ್ಲಿ, ಗಂಗಾಪುರ ಪೇಟೆ ಹಾಗೂ ರಾಜೀವ್ ಗಾಂಧಿ ನಗರ ಗಳಲ್ಲಿ ಕೆಲ ಅಮಾಯಕ ಬಡ ದಲಿತ ಜನರನ್ನು ಬಳಸಿಕೊಂಡು ಬಿಡಿಗಾಸು ನೀಡಿ ಸರ್ಕಾರದ ಪಡೀತರ ಲೂಟಿಗೆ ಇಳಿದಿದ್ದಾರೆ ಎಂದು ಹೋರಾಟಗಾರರು ಕೇಧ ವ್ಯಕ್ತಪಡಿಸಿ, ಅಕ್ರಮ ತಡೆಗಟ್ಟಲು ಒತ್ತಾಯಿಸಿ ನಗರದ ಕಿತ್ತೂರು ರಾಣಿ ವೃತ್ತದಿಂದ ಜಿಲ್ಲಾಡಳಿತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸರ್ಕಾರ ಬಡವರಿಗೆ ಉಚಿತವಾಗಿ ನೀಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಖರೀದಿಸುತ್ತಿರುವುದು ಕೇಳಿ ಬರುತ್ತಿದೆ ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ವಿತರಣೆ ಮಾಡುತ್ತಿದ್ದರೆ, ಆ ಅಕ್ಕಿಯನ್ನು ಹೆಚ್ಚಿನ ಬೆಲೆಯ ಆಸೆ ತೋರಿಸಿ ಖರೀದಿಸುತ್ತಿರುವುದು ಅಲ್ಲಲ್ಲಿ ಕಂಡುಬಂದಿದೆ. ವಿಶೇಷವಾಗಿ ಹಳ್ಳಿಗಳಲ್ಲಿ ಸುತ್ತಾಡುವ ಕೆಲ ಜನರ ಗುಂಪು, ಪ್ರತಿ ಕೆಜಿಗೆ 10 ರೂ. ರಿಂದ 15 ರೂ.ವರೆಗೆ ಹಣ ನೀಡಿ ಖರೀದಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮಸ್ಥರ ಮನೆಗೆ ತೆರಳುವ ಈ ಗುಂಪು, ರೇಷನ್‌ ಅಕ್ಕಿ ಖರೀದಿಸಲಾಗುವುದು ಎಂದು ಹೇಳುತ್ತಾರೆ. ಮನೆ ಬಾಗಿಲಿನಲ್ಲಿಯೇ ಅಕ್ಕಿಯ ತೂಕ ನೋಡಿ, ಹಣ ನೀಡಿ ವಾಹನದಲ್ಲಿ ಹಾಕಿಕೊಂಡು ಸಾಗುತ್ತಾರೆ. ಹೀಗೆ ಸಂಗ್ರಹಿಸಿದ ಅಪಾರ ಪ್ರಮಾಣದ ಅಕ್ಕಿಯನ್ನು ಕೆಲ ದಲ್ಲಾಳಿಗಳಿಗೆ ಮರು ಮಾರಾಟ ಮಾಡುತ್ತಾರೆ. ಅವರು ಅದನ್ನು ಡೀಲರ್ಸ್‌ ಮುಖಾಂತರ ಲಾರಿಗಳಲ್ಲಿ ಬೇರೆ ಕಡೆಗೆ ಸಾಗಿಸುತ್ತಾರೆ ಎಂದು ದೂರಿದರು.

ಈ ಅಕ್ರಮ ಪಡಿತರ ಅಕ್ಕಿ ಸಾಗಾಟ ಗದಗ ಜಿಲ್ಲೆ ಸೇರಿದಂತೆ ಗದಗ ಜಿಲ್ಲೆಯ ರೋಣ ಗಜೇಂದ್ರಗಡ ನರಗುಂದ ಶಿರಹಟ್ಟಿ ಮುಂಡರಗಿ ಲಕ್ಷ್ಮೇಶ್ವರ ಸೇರಿದಂತೆ ಇನ್ನು ಅನೇಕ ಬಾಗಗಳಲ್ಲಿ ರಾಜಾರೋಷವಾಗಿ ಅಕ್ಕಿ ಸಾಗಾಟ ನಡೆಯುತ್ತಿದೆ ಎಂದು ಕೇಳಿ ಬರುತ್ತಿದೆ ಸಂಬಂದಿಸಿದ ಇಲಾಖೆಯವರು ಅಕ್ರಮ ಚಟುವಟಿಗೆ ತಡೆಯುವವರೋ ಇಲ್ಲವೋ ಎಂದು ಕಾದು ನೋಡಬೇಕಿದೆ…

ಇದೆ ಸಂದರ್ಭದಲ್ಲಿ ಭೀಮ್ ಆರ್ಮಿ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ಗೆಜ್ಜಳ್ಳಿ ಯುವರಾಜ ಕೊರವರ ವಿನಾಯಕ ಹೊಸಳ್ಳಿ ರೋಹಿತ್ ಪೂಜಾರ ಮಾಂತೇಶ ಮಾದರ ನಾಗರಾಜ್ ವಡ್ಡರ್ ಸೇರಿದಂತೆ ಉಪಸ್ಥಿತರಿದ್ದರು.

ವರದಿ ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ