ಕಲಬುರಗಿ/ ಜೇವರ್ಗಿ: ಪಟ್ಟಣ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ಸರಕಾರಿ ಸ್ಥಳಗಳು ಹಾಗೂ ರಸ್ತೆಗಳ ಮೇಲೆ ಮತ್ತು ಸರಕಾರಿ ಉದ್ಯಾನವನಗಳಲ್ಲಿ ಮಹಾತ್ಮರ ಪುತ್ಥಳಿಗಳನ್ನು ಪ್ರತಿಷ್ಠಾಪನೆ ಮಾಡದೇ ಇರುವ ಕುರಿತು ಜೇವರ್ಗಿ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೇ ಅನಧಿಕೃತವಾಗಿ ಏಕಾ-ಏಕಿ ಯಾವುದೇ ಸಮಯದಲ್ಲಿ ಸರಕಾರಿ ಸ್ಥಳಗಳಲ್ಲಿ ಹಾಗೂ ರಸ್ತೆಗಳ ಮೇಲೆ ಮತ್ತು ಸರಕಾರಿ ಉದ್ಯಾವನಗಳಲ್ಲಿ ಮಹಾತ್ಮರ ಪುತ್ಥಳಿಗಳನ್ನು ಪ್ರತಿಷ್ಠಾಪನೆ ಮಾಡುತ್ತಿರುವುದು ಕಂಡು ಬಂದಿರುತ್ತದೆ. ಇನ್ನು ಮುಂದೆ ತಾಲೂಕಿನ್ಯಾದಂತ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಇಲಾಖೆಯ ಅನುಮತಿ ಪಡೆಯದೆ ಅನಧಿಕೃತವಾಗಿ ಮಹಾತ್ಮರ ಪ್ರತಿಮೆಗಳನ್ನು ಪ್ರತಿಷ್ಠಾಪನೆ ಮಾಡಿದ್ದು ಕಂಡು ಬಂದಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲದ ಆದೇಶ ಹಾಗೂ
ಕರ್ನಾಟಕ ಸಾರ್ವಜನಿಕ ಆವರಣಗಳು (ಅನಧಿಕೃತ ನಿವಾಸಿಗಳ ತೆರವು) ಕಾಯಿದೆ, 1974 ಪ್ರಕಾರ ಈ ಕಾರ್ಯಕ್ಕೆ ಸಹಕಾರ ನೀಡಿದವರು ಹಾಗೂ ಕಾರಣೀಭೂತರಾಗಿರುವ ವ್ಯಕ್ತಿಗಳ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಇದರಿಂದ ತಾಲೂಕಿನಲ್ಲಿ ಸಮಸ್ಯೆಗಳು ಉಂಟಾಗುವ ಸಂಬಂಧ ಇರುವುದರಿಂದ ಎಲ್ಲಾ ಸಂಘಟನೆಗಳು ಹಾಗೂ ಸಾರ್ವಜನಿಕರು ಪ್ರತಿಮೆ ಪ್ರತಿಷ್ಠಾಪನೆ ಮಾಡದಂತೆ ತಾಲೂಕ ಆಡಳಿತಕ್ಕೆ ಸಹಕರಿಸುವಂತೆ
ಜೇವರ್ಗಿ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಚಂದ್ರಶೇಖರ ಪಾಟೀಲ್
