
ಬಳ್ಳಾರಿ / ಕುರುಗೋಡು : ಪ್ರತಿಯೊಬ್ಬ ವ್ಯಕ್ತಿ ರಕ್ತದಾನ ಮಾಡಬೇಕು ಆಗ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದರ ಜೊತೆಗೆ ಸದೃಢ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ವೈ . ರಮೇಶ ಬಾಬು ಹೇಳಿದರು. ಇಲ್ಲಿನ ಸಮೀಪದ ಲಕ್ಷ್ಮೀಪುರ ಗ್ರಾಮದಲ್ಲಿ ಬಿಎಂಸಿ ಮತ್ತು ಆರ್ ಸಿ ರಕ್ತ ಕೇಂದ್ರ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರ ಜಿಲ್ಲಾ ಆರೋಗ್ಯ ಇಲಾಖೆ ಓರ್ವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಕ ರಕ್ತದಾನ ಶಿಬಿರಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿ ಅಪಘಾತ ಸಂಭವಿಸಿದ ವ್ಯಕ್ತಿಗಳ, ರಕ್ತಹೀನತೆಯಿಂದ ಬಳಲುವ ಗರ್ಭಿಣಿ ಮತ್ತು ಮಗುವಿನ ಪ್ರಾಣ ಉಳಿಸಲು ಪ್ರತಿಯೊಬ್ಬರೂ ಸ್ವಯಂ ಪ್ರೇರಿತ ರಕ್ತದಾನ ಮಾಡಬೇಕು ರಕ್ತದಾನದಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.
ತಾಲೂಕು ಆರೋಗ್ಯ ಅಧಿಕಾರಿ ಡಾ. ಮಂಜುನಾಥ ಜವಳಿ ಮತ್ತು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಮಾತನಾಡಿದರು. ಶ್ರೀನಿವಾಸ್ ನಗರ ಮತ್ತು ಲಕ್ಷ್ಮಿಪುರ ಗ್ರಾಮದ ಮುಖಂಡರು ಮತ್ತು ಯುವಕರು ಸೇರಿದಂತೆ ಒಟ್ಟು 50 ಕ್ಕಿಂತ ಹೆಚ್ಚಿನ ಜನರು ರಕ್ತದಾನ ನೀಡಿದರು.
ಈ ಸಂದರ್ಭದಲ್ಲಿ ಡಾ. ಗುರು ಬಸವರಾಜ ಡಾ. ಲಕ್ಷ್ಮಣ ನಾಯಕ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರಾಘವ ಶೆಟ್ಟಿ , ಸಿಎಚ್ಒ ಶಕ್ಷಾವಲಿ, ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ, ಆಶಾ, ಅಂಬಿಕಾ, ಗ್ರಾಮದ ಮುಖಂಡ ಶಂಭುಸ್ವಾಮಿ ಆಶಾ ಕಾರ್ಯಕರ್ತರು ಗ್ರಾಮದ ಮುಖಂಡರು ಹಾಗೂ ಯುವಕರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್
