
ಉಡುಪಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಲ್ಪೆ ರಾಕೇಶ್ ಪೂಜಾರಿ (33) ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಕಾರ್ಕಳದ ನಿಟ್ಟೆ ಸಮೀಪ ಭಾನುವಾರ ರಾತ್ರಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಅವರು ಕುಸಿದುಬಿದ್ದಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದರು ಎಂದು ಮೂಲಗಳು ತಿಳಿಸಿವೆ.
ಉಡುಪಿ ಮೂಲದವರಾದ ರಾಕೇಶ್, 2018 ರಲ್ಲಿ ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಸೀಸನ್ ಎರಡರ ರನ್ನರ್ ಅಪ್ ತಂಡದಲ್ಲಿದ್ದ ಅವರು ಅನಂತರ ಹಲವು ತುಳು, ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು.
‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ನಟಿಸುತ್ತಿದ್ದ ರಾಕೇಶ್ ಪೂಜಾರಿ ಈಗ ನೆನೆಪು ಮಾತ್ರ.
ವರದಿ : ಜಿಲಾನಸಾಬ್ ಬಡಿಗೇರ್
