ಹಾಸನ ಜಿಲ್ಲೆ ಪ್ರೌಢಶಾಲೆಗಳಿಗೆ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಕಾನೂನು ಅರಿವು ಮೂಡಿಸುವ ಕುರಿತು ವರುಣ್ ಚಕ್ರವರ್ತಿ ಅವರು ಶಿಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.
ಅಪ್ರಾಪ್ತ ಹೆಣ್ಣು ಮಕ್ಕಳ ರಕ್ಷಣೆಗಾಗಿ ರೂಪಿಸಿರುವ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳು ಅರಿವು ಹೊಂದುವ ಅಗತ್ಯ ಇದೆ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ನಡೆಯುತ್ತಿದ್ದ ಅತ್ಯಾಚಾರ, ದೌರ್ಜನ್ಯ ತಡೆಗಟ್ಟಲು 2012ರಲ್ಲಿ ಅಂದಿನ ಕೇಂದ್ರ ಸರ್ಕಾರ ಪೋಕ್ಸೋ ಕಾಯ್ದೆಯನ್ನು ಜಾರಿಗೊಳಿಸಿತು, ಅಪ್ರಾಪ್ತ ಹೆಣ್ಣು ಮಕ್ಕಳ ರಕ್ಷಣೆಗಾಗಿ ಈ ಕಾಯ್ದೆ ರೂಪಿಸಲಾಗಿದೆ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಚುಡಾಯಿಸುವುದು, ಕೈ ಸನ್ನೆ ಮಾಡುವುದು, ಮುಟ್ಟಿ ಮಾತನಾಡಿಸುವುದು ಸೇರಿದಂತೆ ದುರ್ನಡತೆ ತೋರುವುದು ಪೋಕ್ಸೋ ಕಾಯ್ದೆ ಪ್ರಕಾರ ಅಪರಾಧ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಮೂಡಿಸಬೇಕು, ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ ಪೋಕ್ಸೋ ಅಡಿ ಅಂತಹ ಅಪರಾಧಗಳಿಗೆ ಶಿಕ್ಷೆಯಾಗುತ್ತದೆ, ಈ ಬಗ್ಗೆ ಶಾಲೆಗಳಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು, ಶಾಲಾ ಮತ್ತು ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ತಿಳಿವಳಿಕೆ ಮೂಡಿಸಬೇಕಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದಲ್ಲಿ ಕಾಯ್ದೆ ಅನ್ವಯ ಗುರಿಯಾಗಬೇಕಾಗುತ್ತದೆ. ಜತೆಗೆ ಕುಟುಂಬದ ಮರ್ಯಾದೆ ಹೋಗಲಿದೆ. ಶಿಕ್ಷಕರು, ಉಪನ್ಯಾಸಕರು ಈ ಬಗ್ಗೆ ಮಕ್ಕಳಿಗೆ ಬುದ್ದಿವಾದ ಹೇಳಬೇಕು. ಕಾನೂನು ಅರಿವು ನೀಡಿದಲ್ಲಿ ಅಂತಹ ಕೃತ್ಯಕ್ಕೆ ಕಡಿವಾಣ ಹಾಕಬಹುದು ಎನ್ನುವ ಉದ್ದೇಶದಿಂದ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಶಿಕ್ಷಣಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಮೂಲಕ ಮಕ್ಕಳಿಗೆ ಸುರಕ್ಷತೆಯ ಕುರಿತಂತೆ ಜಾಗೃತಿ ಮೂಡಿಸಬೇಕು ಎಂದು ವಿದ್ಯಾರ್ಥಿ ಸಂಘಟನೆಯ ಮುಖಂಡರಾದ ವರುಣ್ ಚಕ್ರವರ್ತಿ ಮತ್ತು ಹರೀಶ್ ಅವರು ಮನವಿ ಮಾಡಿದರು.
BOX
ಜವಾಬ್ದಾರಿಯುತ ಇಲಾಖೆಯವರು ಮಕ್ಕಳಿಗೆ ಕಾಯ್ದೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಹಮ್ಮಿಕೊಳ್ಳಬೇಕು.
1) 18 ವರ್ಷದೊಳಗಿನ ಜಿಲ್ಲೆಯ ಹಾಗೂ ತಾಲೂಕಿನ ಎಲ್ಲಾ ಶಾಲಾ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಕಾನೂನು ಅರಿವು ಅಗತ್ಯವಿದ್ದು ಪೋಕ್ಸೋ ಪ್ರಕರಣಗಳ ಅರಿವು ಮುಖ್ಯವಾಗಿ ಶಾಲೆಗಳಲ್ಲಿ ಬಾಲಕಿಯರು, ಟೀನೇಜ್ ಪ್ರೆಗ್ನೆನ್ಸಿ ಪ್ರಕರಣಗಳು ಹೆಚ್ಚು ಕಂಡು ಬರುತ್ತಿವೆ. ಆದ್ದರಿಂದ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳು, ಐ.ಟಿ.ಐ. ಡಿಪ್ಲೋಮೋ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಫೋಕ್ಸೋ ಕುರಿತಂತೆ ಹೆಚ್ಚಿನ ಅರಿವು ಮೂಡಿಸಬೇಕು”.
2) ಈ ಶಾಲೆ ಪ್ರಾಂಶುಪಾಲರಿಗೆ ಮಕ್ಕಳ ರಕ್ಷಣಾ ನೀತಿ ಮತ್ತು ಫೋಕ್ಸೋ ಕಾಯ್ದೆ ಬಗ್ಗೆ ತರಬೇತಿ ಆಯೋಜಿಸಿ, ಶಾಲೆಗಳಲ್ಲಿ ಕಡ್ಡಾಯವಾಗಿ ಪಾಲಿಸಬೇಕಾದ ಕ್ರಮಗಳ ಕುರಿತಂತೆ ತಿಳಿಸಬೇಕು ಹದಿಹರೆಯದ ವಿದ್ಯಾರ್ಥಿಗಳು ಪೋಕೋ ಪ್ರಕರಣಗಳಲ್ಲಿ ಸಿಲುಕಲು ಶೇ. 70ರಷ್ಟು ಸೋಷಿಯಲ್ ಮೀಡಿಯಾಗಳ ಬಳಕೆ ಕಾರಣವಾಗಿದ್ದು, ವಿದ್ಯಾರ್ಥಿಗಳಿಗೆ ಸುರಕ್ಷಿತ ರೀತಿಯಲ್ಲಿ ಮೊಬೈಲ್ ಬಳಕೆ ಮಾಡುವ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಮನೆಗಳಲ್ಲಿ ಪೋಷಕರು ಜಾಗೃತಿ ಮಾಡಿಸಬೇಕು.
3) ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಮಕ್ಕಳ ರಕ್ಷಣಾ ನೀತಿ ಬಗ್ಗೆ ತರಬೇತಿ ಆಯೋಜಿಸಿ ಶಿಕ್ಷಕರಿಗೆ ಮಾಹಿತಿ ನೀಡಬೇಕು, ಮಕ್ಕಳ ರಕ್ಷಣಾ ನೀತಿ ಸಮರ್ಪಕವಾಗಿ ಅನುಷ್ಠಾನವಾಗಬೇಕು, ಮಕ್ಕಳ ಹಕ್ಕುಗಳ ಕ್ಲಬ್ ರಚಿಸಬೇಕು, ವಿವಿಧ ಇಲಾಖೆಗಳಲ್ಲಿ ಮಕ್ಕಳಿಗಾಗಿ ರೂಪಿಸಿರುವ ಯೋಜನೆಗಳು ಮತ್ತು ಅನುದಾನದ ಸಂಪೂರ್ಣ ಸದ್ಬಳಕೆ ಆಗಬೇಕು.
5) ಆರೋಗ್ಯ ಇಲಾಖೆಯ ಮೂಲಕ ಎಲ್ಲಾ ಶಾಲಾ ಮಕ್ಕಳ ಆರೋಗ್ಯ ಪರಿಶೀಲನೆ ನಡೆಸಿ, ಅಗತ್ಯವಿದ್ದಲ್ಲಿ ಮಕ್ಕಳಿಗೆ ಹೆಚ್ಚಿನ ಚಿಕಿತ್ಸೆ ನೀಡಬೇಕು. ಹದಿ ಹರೆಯದವರ ಗರ್ಭಧಾರಣೆಯ ಕುರಿತಂತೆ ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಪರಿಶೀಲನೆ ನಡೆಸಿ, ವರದಿಯನ್ನು ಸಂಬಂಧಪಟ್ಟ ಇಲಾಖೆಗೆ ನೀಡದೆ ಇರುವ ಬಗ್ಗೆ ಎಚ್ಚರವಹಿಸಬೇಕು ಮತ್ತು ಭ್ರೂಣ ಲಿಂಗಪತ್ತೆ ನಡೆಯದಂತೆ ಕೂಡಾ ಪರಿಶೀಲಿಸಬೇಕು. ಗ್ರಾಮ ಪಂಚಾಯತ್ ಸೇರಿದಂತೆ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳಲ್ಲಿನ 25% ಅನುದಾನದಲ್ಲಿ 18 ವರ್ಷದೊಳಗಿನ ಮಕ್ಕಳಿಗೂ ಮೀಸಲಿಡಬೇಕು. 5% ವಿಕಲಚೇತನ ಅನುದಾನದಲ್ಲಿ ವಿಕಲಚೇತನ ಮಕ್ಕಳಿಗೆ ಸೌಲಭ್ಯಗಳನ್ನು ನೀಡಿ, 2% ಕ್ರೀಡಾ ಅನುದಾನದಲ್ಲಿ ಮಕ್ಕಳಿಗೆ ಸೌಲಭ್ಯಗಳನ್ನು ನೀಡಬೇಕು. ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯವನ್ನು ಆರೋಗ್ಯ ಇಲಾಖೆ ಮೂಲಕ ಪರೀಕ್ಷಿಸಿ, ಅವರ ಆರೋಗ್ಯಕ್ಕೆ ಒತ್ತು ನೀಡಿ ಮಕ್ಕಳ ಮನೋ ವಿಕಾಸಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು.
- ಕರುನಾಡ ಕಂದ
