ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೋಬಿಗಾಟ್ ಕಾಮಗಾರಿ ಕಳಪೆ : ಶಾಸಕಿ ಅನ್ನಪೂರ್ಣ ಪರಿಶೀಲಿಸಿ, ಶಿಸ್ತುಕ್ರಮಕ್ಕೆ ಸೂಚನೆ

ಬಳ್ಳಾರಿ / ಕುಡತಿನಿ : ದೋಬಿಗಾಟ್ ಪರಿಶೀಲನೆ ಮಾಡಿದ್ದು, ತುಂಬಾ ಕಳಪೆ ಕಾಮಗಾರಿಯಾಗಿದ್ದು, ಗುತ್ತಿಗೆದಾರರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಜತೆಗೆ ಪರ್ಯಾಯವಾಗಿ ದೋಬಿಗಾಟ್ ನಿರ್ಮಾಣಕ್ಕೆ ಸೂಚಿಸಲಾಗಿದೆ ಎಂದು ಶಾಸಕಿ ಅನ್ನಪೂರ್ಣ ಈ. ತುಕಾರಾಂ ಹೇಳಿದರು.
ಕುಡತಿನಿ ಪಟ್ಟಣದ ಸಾರ್ವಜನಿಕ ರುದ್ರಭೂಮಿ ಬಳಿಯಲ್ಲಿರುವ ದೋಬಿಗಾಟ್ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿ, ಇಲ್ಲಿನ ದೋಬಿಗಾಟ್ ಕಾಮಗಾರಿ ಸಂಪೂರ್ಣವಾಗಿ ಕಳಪೆಯಿಂದ ಕೂಡಿದ್ದು, ಇಂತವರ ವಿರುದ್ಧ ಕಠಿಣ ಕ್ರಮವಾಗಬೇಕಾಗಿದೆ. 20 ಹಾಸಿಗೆಯುಳ್ಳ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ಪರಿಶೀಲಿಸಿದ್ದು, ಸೂಕ್ತ ಸ್ಥಳದಲ್ಲಿ ನಿರ್ಮಿಸಲಾಗುವುದು. 50 ಲಕ್ಷ ಲೀಟರ್ ಸಾಮಾರ್ಧ್ಯದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಅತಿ ಶೀಘ್ರದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು. ಮುಂದಿನ ದಿನದಲ್ಲಿ ಛಲುವಾದಿ ಸಮುದಾಯ ಭವನ ನಿರ್ಮಿಸಿಕೊಡಲಾಗುವುದು. ಈಗಾಗಲೇ ಕುಡತಿನಿಗೆ ಒಂದು ಸಾವಿರ ಮನೆಗಳು ಮಂಜೂರು ಆಗಿದ್ದು, ವಸತಿ, ಮನೆ ರಹಿತ ಅರ್ಹ ಫಲಾನುಭವಿಗಳ ಪಟ್ಟಿ ನೀಡುವಂತೆ ತಿಳಿಸಲಾಗಿದ್ದು, ಆದಷ್ಟು ಬೇಗ ಕೊಟ್ಟರೆ, ಜಿ+ ಮನೆ ನಿರ್ಮಿಸಿಕೊಡಲಾಗುವುದು. ಜನತೆಗೆ ಮೂಲಭೂತ ಸೌಲಭ್ಯ ಮತ್ತು ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಆಯಾ ಇಲಾಖೆ ಅಧಿಕಾರಿಗಳು ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಸುಜಾತಾ ಸತ್ಯಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ರಾಜಶೇಖರ, ಉಪಾಧ್ಯಕ್ಷ ಕನಕೇರಿ ಪಂಪಾಪತಿ, ಸದಸ್ಯರು, ಮುಖ್ಯಾಧಿಕಾರಿ ತೀರ್ಥಪ್ರಸಾದ್, ಎಇಇ ಅರುಣ್ ಪಟೇಲ್, ರಾಜೇಂದ್ರ ಪ್ರಸಾದ್, ಜೆಇ ಶಾರದಾ, ಮುಖಂಡರಾದ ಕೆ.ಎಸ್.ಎಲ್.ಸ್ವಾಮಿ, ಪಲ್ಲೇದ್ ಪ್ರಭು, ಕಂಬತ್ ರಾಮಾಂಜಿನಿ, ಚಂದ್ರಪ್ಪ, ಕೌಸಿಕ್, ವಿಠೋಬ, ಹನುಮಂತ, ವಿನೋದ, ರಮೇಶ, ಪ್ರತಾಪ್, ಆನಂದ ಸೇರಿದಂತೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!