ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್.ಎಲ್.ಟಿ ಶಾಲೆಯ ಅಮೋಘ ಸಾಧನೆ : ಸಿ.ಬಿ.ಎಸ್.ಸಿ 100% ಫಲಿತಾಂಶ

ಯಾದಗಿರಿ/ ಗುರುಮಠಕಲ್: ಎಸ್ಸೆಸ್ಸೆಲ್ಸಿ ಸಿ.ಬಿ.ಎಸ್.ಸಿ ತರಗತಿಗಳ ಫಲಿತಾಂಶ ಪ್ರಕಟವಾಗಿದ್ದು, ಗಿರಿನಾಡು ಯಾದಗಿರಿ ಜಿಲ್ಲೆಯ ಗುರುಮಠಕಲ್ ನ ಎಸ್. ಎಲ್.ಟಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಪ್ರಸಕ್ತ 2024-25 ನೇಯ ಸಾಲಿನಲ್ಲಿ ಶಾಲೆ ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ.

ಶಾಲೆಯ ವಿದ್ಯಾರ್ಥಿಗಳಾದ ಅಂಕುಶ್ ರೆಡ್ಡಿ ತಂದೆ ವಿಶ್ವನಾಥರೆಡ್ಡಿ ಶೇ.91%, ರೋಹನ್ ತಂದೆ ವಿನಾಯಕ್ ರಾವ್ ಶೇ.83%, ರಶ್ಮಿಕಾ ತಂದೆ ವಸಂತ ರಾವ್ 81.4%, ಇಷ್ಟಾರ್ಥ ಬೂದಿ ತಂದೆ ಸತ್ಯಾನಂದ ಬೂದಿ 76% ಹಾಗೂ ಬಿಂದುರೆಡ್ಡಿ ತಂದೆ ಶ್ರೀನಿವಾಸ್ ರೆಡ್ಡಿ 75% ರಷ್ಟು ಫಲಿತಾಂಶ ದಾಖಲಿಸಿದ್ದಾರೆ.

ಎಸ್. ಎಲ್. ಟಿ ಶಾಲೆಯಲ್ಲಿ ಸಿಬಿಎಸ್‌ಐ ಅಧ್ಯಯನ ಮಾಡುತ್ತಿದ್ದ 32 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಆಗಿದ್ದು, 15 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ.
ಇನ್ನೂ 14 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಸಂಸ್ಥೆಯ ಅಧ್ಯಕ್ಷರು ಶ್ರೀ ಅನ್ವರ ಶೇಕ್ ಮಾತನಾಡಿ ಪೋಷಕರು ನಮ್ಮ ಸಂಸ್ಥೆಯ ಮೇಲೆ ಅಪಾರವಾದ ನಂಬಿಕೆಯನ್ನು ಇಟ್ಟಿದ್ದಾರೆ, ನಮ್ಮ ಬೋಧಕ ವರ್ಗದ ಹೆಚ್ಚಿನ ಪರಿಶ್ರಮದಿಂದ 100 ಪ್ರತಿಶತ ಫಲಿತಾಂಶ ಸಾಧಿಸಲು ಸಾಧ್ಯವಾಗಿದೆ, ನಮ್ಮ ಮೇಲೆ ಭರವಸೆ ಇಟ್ಟಿರುವ ಎಲ್ಲಾ ಪೋಷಕರಿಗೆ ಹಾಗೂ ಎಸ್.ಎಲ್.ಟಿ ಟ್ರಸ್ಟ್ ಅಧ್ಯಕ್ಷರಾದ ಶ್ರೀ ನರೇಂದ್ರ ರಾಥೋಡ್ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.
ಸಾಧನೆಗೈದ ಎಲ್ಲಾ ವಿದ್ಯಾರ್ಥಿ ಗಳಿಗೆ ಹಾಗೂ ಪೋಷಕರಿಗೆ ಶಾಲಾ ಮಂಡಳಿವತಿಯಿಂದ ಸನ್ಮಾನಿಸಿ ಮುಂದಿನ ವ್ಯಾಸಂಗಕ್ಕೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರು ನದೀಮ್ ಅಹ್ಮದ್, ಕಾರ್ಯದರ್ಶಿಗಳಾದ ತೌಸಿಫ್ ಅಹಮದ್, ಹಫೀಜ್ ಅಹ್ಮದ್, ವಿದ್ಯಾರ್ಥಿಗಳ ಪೋಷಕರು, ಶಾಲೆಯ ಸಿಬ್ಬಂದಿ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!