ತೆಲಂಗಾಣದ : ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭಾನುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಈ ಚಾರ್ಮಿನಾರ್ (CharMinar) ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದೆ. 8 ಕುಟುಂಬದ ಮಕ್ಕಳು ಸೇರಿದಂತೆ ಒಟ್ಟು 17 ಮಂದಿ ಸಜೀವ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ. ಇದರ ಮಧ್ಯ ಆಂಧ್ರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಕಾರು ಬಾವಿಗೆ ಬಿದ್ದಿದ್ದು, ಈ ದುರ್ಘಟನೆಯಲ್ಲಿ ಕರ್ನಾಟಕ ಮೂವರು ಮೃತಪಟ್ಟಿದ್ದಾರೆ.
ಆಂಧ್ರ ಪ್ರದೇಶದಲ್ಲಿ ಕಾರು ಬಾವಿಗೆ ಉರುಳಿ ಬಿದ್ದಿದ್ದು, ಈ ಘಟನೆಯಲ್ಲಿ ಕರ್ನಾಟಕದ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆ ಆಂಧ್ರದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ನಡೆದಿದೆ.
ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೊಕೇಶ(34), ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಮೃತರು. ಇನ್ನು ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾದಿಂದ ಪಾರಾಗಿದ್ದಾರೆ.
ಅಡುಗೆ ಕೆಲಸಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದರು. ಆ ವೇಳೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿಯ ಬಾವಿಗೆ ಕಾರು ಬಿದ್ದಿದೆ. ಪಿಲೇರು ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ಸಂಭವಿಸಿದೆ.
ವರದಿ : ಜಿಲಾನಸಾಬ್ ಬಡಿಗೇರ್
