ಚಾಮರಾಜನಗರ/ ಹನೂರು : ಸರ್ಕಾರದ ಗಂಗ ಕಲ್ಯಾಣ ಯೋಜನೆಯಡಿಯಲ್ಲಿ ನೀಡುತ್ತಿರುವ ಸೌಲಭ್ಯಗಳನ್ನು ರೖತರು ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು.
ಪಟ್ಟಣ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ ವತಿಯಿಂದ ರೈತರಿಗೆ ಗಂಗಾಕಲ್ಯಾಣ ಯೋಜನೆ ಯೋಜನೆಯಡಿ ಮೋಟಾರ್ ಪೈಪ್ ವೈರ್ ಇನ್ನಿತರ ವಿದ್ಯುತ್ ಪೂರಕ ಪರಿಕರ ಸಾಮಗ್ರಿಗಳನ್ನು ವಿತರಣೆ ಮಾಡಿ ಮಾತನಾಡಿದ ಶಾಸಕರು
ರೈತರು ಸರ್ಕಾರದಿಂದ ನೀಡುತ್ತಿರುವ ಇಂತಹ ಉತ್ತಮ ಸೌಲಭ್ಯಗಳನ್ನು ಸದುಪಯೋಗ ಪಡೆದು ಕೊಳ್ಳುವ ನಿಟ್ಟಿನಲ್ಲಿ ಅನುಕೂಲ ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ರೈತರಿಗೆ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನ ಮಾಡಲಾಗುವುದು ಎಂದರು.
ಇದೆ ಸಂದರ್ಭದಲ್ಲಿ ರೈತ ಫಲಾನುಭವಿಗಳು ತಮ್ಮ ವ್ಯವಸಾಯಕ್ಕೆ ಅನುಕೂಲವಾಗುವ ಪರಿಕರ ಸವಲತ್ತು ವಿತರಣೆ ಮಾಡಿದ್ದಕ್ಕೆ ಹಾಗೆ ಮುಂದಿನ ದಿನದಲ್ಲಿ ಇನ್ನೂ ಹೆಚ್ಚಿನ ಸಹಾಯ ಮಾಡುತ್ತೇನೆ ಎಂದು ಭರವಸೆ ಕೊಟ್ಟಿದ್ದೇವೆ ಕೃತಜ್ಞತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಅಂಬೇಡ್ಕರ್ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಾಜು,ಹರೀಶ್ ಹಾಗೂ ಫಲಾನುಭವಿಗಳು, ಮುಖಂಡರುಗಳು ಉಪಸ್ಥಿತರಿದ್ದರು.
ವರದಿ: ಉಸ್ಮಾನ್ ಖಾನ್
