ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ
ಕುಳಗೇರಿ ಕ್ರಾಸ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಬಡಾವಣೆಯಲ್ಲಿ ಸರಣಿ ಕಳ್ಳತನ ನಡೆದಿದ್ದು ಹಣ ಮತ್ತು ವಡವೆಗಳನ್ನು ದೋಚಿ ಪರಾರಿಯಾಗಿದ್ದಾರೆ. ಶುಕ್ರವಾರ ತಡರಾತ್ರಿ ನಾಲ್ಕು ಜನ ಮುಸಕುಧಾರಿಗಳು ಕೈಯಲ್ಲಿ ಕಬ್ಬಿಣದ ಸಲಾಕೆಯನ್ನು ಹಿಡಿದುಕೊಂಡ ದೃಶ್ಯ ಸಿ ಸಿ ಟಿವಿಯಲ್ಲಿ ಸೆರೆಯಾಗಿದೆ. ಬಡಾವಣೆಯಲ್ಲಿ ಯಾವ ಮನೆ ಕೀಲಿ ಹಾಕಿದ್ದಾವೆ ಆ ಮನೆಗೆ ಕಳ್ಳರು ಕಳ್ಳತನಕ್ಕೆ ಮುಂದಾಗಿದ್ದಾರೆ, ಈ ಗ್ರಾಮದಲ್ಲಿ ಭಯದ ವಾತಾವರಣ ಉಂಟಾಗಿದೆ. ಸ್ಥಳಕ್ಕೆ ಶ್ವಾನದಳದೊಂದಿಗೆ ಬೆರಳಚ್ಚು ತಂಡ ಹಾಗೂ ಸ್ಥಳೀಯ ಪೋಲಿಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದರು.
ವರದಿ : ಅಬ್ದುಲಸಾಬ ನಾಯ್ಕರ
