ವಿಜಯನಗರ / ಹೊಸಪೇಟೆ : ನಗರದ ಹೊರ ವಲಯದ ಪಂಚಚಾರ್ಯ ನಗರದಲ್ಲಿರುವ
ಶ್ರೀ ಶನೇಶ್ವರ ದೇವಸ್ಥಾನದಲ್ಲಿ ದೇವಸ್ಥಾನ ಸಮಿತಿಯಿಂದ ಮೇ 27ರಂದು ಶ್ರೀ ಶನೇಶ್ವರ ಜಯಂತಿ ನಿಮಿತ್ಯ ಬೆಳಿಗ್ಗೆ ಶ್ರೀ ಸ್ವಾಮಿಗೆ ವಿಶೇಷ ಪೂಜೆ ತೈಲಾಭಿಷೇಕ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಪುಷ್ಪಲಂಕಾರ ನಡೆಸಲಾಗುತ್ತದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಬಿ. ಹಾಲನಗೌಡ ತಿಳಿಸಿದ್ದಾರೆ.
ಬೆಳಿಗ್ಗೆ 5ಕ್ಕೆ ಶ್ರೀ ಸ್ವಾಮಿಯ ಉತ್ಸವ ಮೂರ್ತಿಯೊಂದಿಗೆ ತುಂಗಭದ್ರಾ ಜಲಾಶಯದ ಹಿನ್ನೀರಿನ ಗಂಗಾ ಸ್ಥಳಕ್ಕೆ ತೆರಳಿ ಗಂಗಾ ಪೂಜೆ ನೆರವೇರಿಸಲಾಗುವುದು.
ನಂತರ ಜನಪದ ಕಲಾತಂಡ ಸಮಾಳ ನಂದಿಕೋಲು ವಾದ್ಯ ಸಂಗೀತದೊಂದಿಗೆ ದೇವಸ್ಥಾನಕ್ಕೆ ಮರಳಲಾಗುತ್ತದೆ. ದೇವಸ್ಥಾನದಲ್ಲಿರುವ ಶ್ರೀ ವಿಘ್ನೇಶ್ವರ, ಶ್ರೀ ಶಾಂತಲಿಂಗೇಶ್ವರ, ಜೇಷ್ಠದೇವಿ, ಶಾಂಭವಿ ಮಾತೆ, ಶ್ರೀ ನಂದಿ ನವಗ್ರಹ ಹಾಗೂ ಕಾಳಿಕಾದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಪೂಜಾ ನಂತರ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್
