ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ಲಾಸ್ಟಿಕ್ ಮಾಲಿನ್ಯ ಕೊನೆಗೊಳಿಸಲು ಜಾಗೃತಿ, ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ | ಜಿ.ಪಂ ಸಿಇಓ ಮಹಮ್ಮದ್ ಹ್ಯಾರಿಸ್ ಸುಮೈರ್ ಸಲಹೆ

ಬಳ್ಳಾರಿ : ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಆಚರಿಸಲಾಗುತ್ತದೆ ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸಲಾಗುವುದು ಎಂಬ ಘೋಷವಾಕ್ಯದೊಂದಿಗೆ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವ ಮಹತ್ವವನ್ನು ತಿಳಿಸುವ ಉದ್ದೇಶದೊಂದಿಗೆ ಮೇ 22 ರಿಂದ ಜೂನ್ 05 ರ ವರೆಗೆ ಪೂರ್ವ ಅಭಿಯಾನವನ್ನು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹಮ್ಮದ್ ಹ್ಯಾರೀಶ್ ಸುಮೈರ್ ಅವರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯ ಸ್ವಚ್ಛ ಭಾರತ್ ಮಿಷನ್ (ಗ್ರಾ.) ಯೋಜನೆಯ ಘನ ತ್ಯಾಜ್ಯ ನಿರ್ವಹಣಾ ಪ್ರಯತ್ನಗಳ ಪ್ರಮುಖ ಭಾಗವಾಗಿದ್ದು ಈ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜೂನ್ 5 ರ ವರೆಗೆ ಜಾಗೃತಿ ಅಭಯಾನದಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುವ ದುಷ್ಪರಿಣಾಮಗಳು ಹಾಗೂ ಇದರ ನಿರ್ಮೂಲನೆ ಮಾಡುವ ಸಂಬಂಧ ವಿವಿಧ ಸಾರ್ವಜನಿಕ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮ ಚಟುವಟಿಕೆ ಶ್ರಮದಾನ ಸಂವಾದ ಸಭೆಗಳನ್ನು ಆಯೋಜನೆ ಮಾಡಿ ಜನರಲ್ಲಿ ಜಾಗೃತಿ ಮೂಡಿಸಲಾಗುವುದು.

ಈ ಅಭಿಯಾನದಲ್ಲಿ ವಿಶೇಷವಾಗಿ ಜಲಮೂಲಗಳ ಸುತ್ತಮುತ್ತ ಸ್ವಚ್ಛಗೊಳಿಸುವುದು ಗ್ರಾಮದಲ್ಲಿ ಬ್ಲಾಕ್ ಸ್ಪಾಟ್ ( ಕಸ ಎಸೆಯುವ ಸ್ಥಳ )ಗುರುತಿಸಿ ಸ್ವಚ್ಛಗೊಳಿಸುವುದು ಚರಂಡಿ ಸ್ವಚ್ಛಗೊಳಿಸುವುದು ಅದರಲ್ಲಿ ಪ್ಲಾಸ್ಟಿಕ್ ಮತ್ತು ಇತರೆ ವಸ್ತುಗಳನ್ನು ಎಸೆಯದಂತೆ ತಿಳಿಸುವುದು. ಬಳಕೆಯ ಪ್ಲಾಸ್ಟಿಕ್ ವಸ್ತು ಕವರ್ ಗಳನ್ನು ಉತ್ಪಾದಿಸುವ ಮಾರಾಟ ಮಾಡುವ ಗ್ರಾಹಕರಿಗೆ ನೀಡುವ ಅಂಗಡಿ, ಹೋಟೆಲ್, ಬೇಕರಿ ಇತರೆ ವಾಣಿಜ್ಯ ಮಳಿಗೆಗಳಿಗೆ ತಪಾಸಣೆ ಮಾಡುವುದು.
ಬಳಕೆಯಾದ ಪ್ಲಾಸ್ಟಿಕ್ ವಸ್ತುಗಳನ್ನು ಸೂಕ್ತ ವಿಲೇವಾರಿ ಮಾಡುವಂತೆ ಪ್ರೇರಣೆ, ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಮಾಡಿ ವಿಂಗಡಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದಾಗಿದೆ. ಅಭಿಯಾನದಲ್ಲಿ ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳು, ಯುವಕರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಮತ್ತು ಸ್ವಯಂ ಸೇವಕರು, ಮುಖಂಡರು ಅಭಿಯಾನದಲ್ಲಿ ಭಾಗವಹಿಸಿ ಪ್ಲಾಸ್ಟಿಕ್ ಮುಕ್ತ ಗ್ರಾಮಗಳನ್ನಾಗಿ ರೂಪಿಸಲು ಸಹಕರಿಸಲು ಮನವಿ ಮಾಡಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ