ಚಾಮರಾಜನಗರ/ಕೊಳ್ಳೇಗಾಲ : ತಾಲ್ಲೂಕಿನ ಕುಣಗಳ್ಳಿ ಗ್ರಾಮದ ಪರಿಶಿಷ್ಟ ಜನಾಂಗದ ಬಡಾ ವಣೆಯಲ್ಲಿ ಎಸ್‌ಇಪಿ, ಟಿಎಸ್‌ಪಿ ಯೋಜನೆಯಡಿ 17 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಭೂಮಿಪೂಜೆ ನೆರೆವೇರಿಸಿ ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದ ಎಲ್ಲಾ ವರ್ಗದ ಜನರ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದ್ದು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುತ್ತಿರುವುದು ಸಂತಸ ತಂದಿದೆ, ಕ್ಷೇತ್ರ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಲು ಒತ್ತು ನೀಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ತಂದು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕುಣಗಳ್ಳಿ ಗ್ರಾಪಂ ಅಧ್ಯಕ್ಷೆ ಮಂಗಳಮ್ಮ, ಮಾಜಿ ಅಧ್ಯಕ್ಷ ಚಿನ್ನಪ್ಪ, ಸದಸ್ಯರಾದ ಚಂದ್ರಶೇಖರ್, ಲಿಂಗರಾಜು, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ರಾಜೇಂದ್ರ, ಸದಸ್ಯರಾದ ಪಿ.ಕೆ.ಶ್ರೀನಿವಾಸ್‌ಮೂರ್ತಿ, ಮುಖಂಡರಾದ ಮಹೇಶ್, ನಂಜುಂಡಸ್ವಾಮಿ, ಕೆಆರ್‌ಐಡಿಎಲ್ ಎಇಇ ಚಿಕ್ಕಲಿಂಗಯ್ಯ ಸೇರಿದಂತೆ ಇತರರಿದ್ದರು.
ವರದಿ ಉಸ್ಮಾನ್ ಖಾನ್
