ಯಾದಗಿರಿ/ಗುರುಮಠಕಲ್: 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಗುರುಮಠಕಲ್ ತಾಲೂಕಿನ ಸರ್ಕಾರಿ ನೌಕರರ ಮಕ್ಕಳು ಪ್ರತಿಭಾ ಪುರಸ್ಕಾರಕ್ಕೆ ಸಲ್ಲಿಸುವಂತೆ ಸಂತೋಷ್ ನಿರೇಟಿ ವಿಭಾಗೀಯ ಉಪಾಧ್ಯಕ್ಷರು ಹಾಗೂ ಗುರುಮಠಕಲ್ ಸರಕಾರಿ ನೌಕರರ ಸಂಘ ತಾಲೂಕಾಧ್ಯಕ್ಷರು ಕೋರಿದ್ದಾರೆ.
ತಾಲೂಕಿನ ಸರ್ಕಾರಿ ನೌಕರರ ಮಕ್ಕಳು 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಮೇ.31 ಕೊನೆಯ ದಿನವಾಗಿದ್ದು ವಿದ್ಯಾರ್ಥಿಗಳ ತಂದೆ ಅಥವಾ ತಾಯಿ ಖಾಯಂ ಸರ್ಕಾರಿ ನೌಕರರಾಗಿರಬೇಕು, ವಿದ್ಯಾರ್ಥಿಯು 2025ರ SSLC/PUC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು, ದೃಢೀಕೃತ ಅಂಕಪಟ್ಟಿ ಇರಬೇಕು ಹಾಗೂ ಸಂಘವು ನಿಗದಿಪಡಿಸಿದ ನಮೂನೆಯಲ್ಲಿ ತಾಲೂಕು ಅಧ್ಯಕ್ಷರ ಸಹಿ, ಮೊಹರಿನೊಂದಿಗೆ ಅಗತ್ಯ ದಾಖಲೆಗಳನ್ನು ಅಪಲೋಡ್ ಮಾಡುವಂತೆ ವಿನಂತಿಸಿದ್ದಾರೆ.
ಈ ಕೆಳಗಿನ ಆನ್ ಲೈನ್ ಲಿಂಕ್ ಮೂಲಕ
https://ksgeanews.blogspot.com ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Online ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು
ವಿದ್ಯಾರ್ಥಿಯ ಪಾಸ್‌ಪೋರ್ಟ್ ಭಾವಚಿತ್ರ ಮತ್ತು ದೃಢೀಕೃತ ಅಂಕಪಟ್ಟಿ,ಇಲಾಖೆಯ ಸೇವಾ ದೃಢೀಕರಣ ಪತ್ರ,ಸಂಘದ ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು/ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರ.
ಈ ಮೇಲ್ಕಂಡ ಲಗತ್ತುಗಳನ್ನು ನಿಗದಿತ JPG Formatನಲ್ಲಿ (1 MBಮೀರದಂತೆ) ಅಪ್ ಲೋಡ್ ಮಾಡುವುದು, ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್‌ಗೆ ಸ್ವೀಕೃತಿ ರವಾನೆಯಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
9900235777
96112 71619
ವರದಿ: ಜಗದೀಶ್ ಕುಮಾರ್ ಭೂಮಾ
