ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆರ್.ಸಿ.ಬಿ ಅಭಿಮಾನಿಗಳ ಸಾವಿಗೆ ಸರಕಾರ ನೈತಿಕ ಹೊಣೆಯಾಗಲಿ

ಕಲಬುರಗಿ: ಕಾಂಗ್ರೆಸ್‌ ಸರ್ಕಾರದ ಅವ್ಯವಸ್ಥೆಯಿಂದಾಗಿ ಹಲವಾರು ಅಮಾಯಕ ಆರ್.ಸಿ.ಬಿ ಅಭಿಮಾನಿಗಳ ಸಾವಾಗಿದೆ, ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವುದು ನಿಜಕ್ಕೂ ದುರಂತದ ವಿಷಯ. ಸಿ. ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ ಅವರು ಸೂಕ್ತ ವ್ಯವಸ್ಥೆಗಳು, ಯೋಜನೆ ಮತ್ತು ಜನಸಂದಣಿಯ ನಿರ್ವಹಣೆ ಮಾಡದ ಪರಿಣಾಮ ಇಂತಹ ಹೃದಯವಿದ್ರಾವಕ ಘಟನೆ ನಡೆದಿದೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ವಕ್ತಾರ ಆನಂದ ತೆಗನೂರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೊಡ್ಡ ಪ್ರಮಾಣದಲ್ಲಿ ಸಂಭ್ರಮಾಚರಣೆ ನಡೆಯುತ್ತದೆ ಎಂದು ಗೊತ್ತಿದ್ದರೂ ಕೂಡ ರಾಜ್ಯ ಸರ್ಕಾರವು ಸರಿಯಾದ ರೂಪುರೇಷೆ ಹಾಗೂ ತಯಾರಿ ಮಾಡಿಕೊಳ್ಳದೆ ಇರುವುದು ಇಂತಹ ದುರಂತಕ್ಕೆ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸರ್ಕಾರ ಮುನ್ನೆಚ್ಚರಿಕೆ ವಹಿಸಿದ್ದರೆ ಈ ದುರ್ಘಟನೆ ತಪ್ಪಿಸಬಹುದಿತ್ತು. ಆದರೆ ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಮತ್ತು ಇದರ ಹೊಣೆಗಾರಿಕೆಯನ್ನು ಸರ್ಕಾರವೇ ಹೊರಬೇಕು ಎಂದು ಅವರು ಆಗ್ರಹಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ