ಬೆಂಗಳೂರು : ಡಾ || ಕೆ ಸುಧಾಕರ್ ರವರು ಬೆಂಗಳೂರಿನಲ್ಲಿ ನಡೆದ ಆಸಾಂಕ್ರಾಮಿಕ ರೋಗಗಳ ನಿಯಂತ್ರಣದ ಸಂಬಂಧ ಅರೋಗ್ಯ ವರ್ಲ್ಡ್ ಟ್ರಸ್ಟ್ ನೊಂದಿಗೆ ಸಮನ್ವಯ ಸಾಧಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.
ಇದೇ ಸಂಧರ್ಭದಲ್ಲಿ ಆಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಣ ಹಾಗೂ ಚಿಕಿತ್ಸೆಗಾಗಿ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಿಸಿಕೊಳ್ಳುವ ಬಗ್ಗೆ ಕುರಿತು ಚರ್ಚೆ ನಡೆಸಲಾಯಿತು
ಆಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ನಮ್ಮ ರಾಜ್ಯವು ದೇಶದಲ್ಲೇ ಮುಂಚೂಣಿಯಲ್ಲಿದ್ದು ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಮಾತನಾಡಿದರು
-ರಾಜಪ್ಪ.ಎಂ.