ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗ್ರಾಮಸ್ಥರು ಭಯಭೀತರಾಗಿದ್ದಾರೆ ಕೂಡಲೇ ಹುಲಿಯನ್ನು ಸೆರೆಹಿಡಿಯಬೇಕು

ಚಾಮರಾಜನಗರ/ ಗುಂಡ್ಲುಪೇಟೆ :ಕರ್ನಾಟಕ ಕಾವಲು ಪಡೆಯ ವತಿಯಿಂದ ಇಂದು ಗುಂಡ್ಲುಪೇಟೆ ತಾಲ್ಲೂಕಿನ ಬೆಂಡರವಾಡಿ ಗ್ರಾಮ ಬಾಳೆ ಎಲೆ ಮಾದಯ್ಯ ಟ್ರಸ್ಟ್ ಹಾಗೂ ಬೆಂಡರವಾಡಿ ಗ್ರಾಮಸ್ಥರ ನೇತೃತ್ವದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸುರೇಶ್ ಕುಮಾರ್ ರವರ ಜೊತೆ ಪುತ್ತನಪುರ, ವಡ್ಡನಹೊಸಹಳ್ಳಿ, ಬಸವಾಪುರ, ಅಣ್ಣೂರು ಕೇರಿ ಐದು ಗ್ರಾಮಸ್ಥರ ಜೊತೆ ಗೂಡಿ ಸಭೆ ನಡೆಸಲಾಯಿತು. ಸುತ್ತಮುತ್ತ ವನ್ಯ ಜೀವಿ ಹುಲಿ ಚಿರತೆ ಕಾಟ ಇರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ ಕೂಡಲೇ ಹುಲಿಯನ್ನು ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಹೇಳಿಕೊಂಡರು.
ಈ ಸಂದರ್ಭದಲ್ಲಿ ಕಾವಲು ಪಡೆಯ ತಾಲ್ಲೂಕು ಅಧ್ಯಕ್ಷರಾದ ಎ. ಅಬ್ದುಲ್ ಮಾಲಿಕ್ ಹಾಗೂ ಕನ್ನಡಪರ ಹಿರಿಯ ಹೋರಾಟಗಾರರಾದ ಬ್ರಹ್ಮಾನಂದ್, ಪರಿಸರ ಸಂರಕ್ಷಣಾ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಪಿ. ಬಾಲು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳ ಕಾಟದಿಂದ ರೈತರು ಸಾಕು ಪ್ರಾಣಿಗಳನ್ನು ಕಳೆದುಕೊಂಡು ಸಾಲಗಾರರಾಗುತ್ತಿದ್ದಾರೆ ಜೊತೆಗೆ ಅವರ ಜೀವದ ಭಯವು ಇದೇ ಆದ್ದರಿಂದ ತಕ್ಷಣ ಹುಲಿ ಸೆರೆ ಹಿಡಿಯುವ ಕಾರ್ಯಚರಣೆ ನಡೆಸಬೇಕೆಂದು ಒತ್ತಾಯಿಸಿದರು.
ಇದೇ ವೇಳೆ ಅಧಿಕಾರಿಗಳಾದ ಸುರೇಶ್ ಕುಮಾರ್ ರವರು ಮಾತನಾಡಿ 15 ದಿನಗಳಲ್ಲಿ ಹುಲಿ ಸೆರೆಹಿಡಿಯುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಆರ್.ಎಫ್.ಓ. ಶಿವುಕುಮಾರ್, ಕಾವಲು ಪಡೆಯ ತಾಲ್ಲೂಕು ಗೌರವಾಧ್ಯಕ್ಷರಾದ ರಾಮೇಗೌಡ, ಟೌನ್ ಸಂಚಾಲಕರಾದ ಮಿಮಿಕ್ರಿರಾಜು, ಸಾಹಿತಿ ಕಾಳಿಂಗಸ್ವಾಮಿ ಸೇರಿದಂತೆ ಮುಖಂಡರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!