ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಕಂಪ್ಲಿ ಪೊಲೀಸರು

ಬಳ್ಳಾರಿ/ ಕಂಪ್ಲಿ : ಕಂಪ್ಲಿ ಪಟ್ಟಣದ ಐತಿಹಾಸಿಕ ಸೋಮಪ್ಪ ಕೆರೆ ಅಂಗಳದಲ್ಲಿ ಇತ್ತೀಚೆಗೆ ವ್ಯಕ್ತಿಯೊಬ್ಬರ ಕೊಲೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಕಂಪ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೇ.15ರ ರಾತ್ರಿ ಸಮಯದಲ್ಲಿ ಆಂಧ್ರ ಪ್ರದೇಶದ ನದಿಚಾಗಿ ಗ್ರಾಮದ ದೊಡ್ಡ ಬಸವನಗೌಡ ಇವರನ್ನು ಆರೋಪಿಗಳು ಬರ್ಬರವಾಗಿ ಕೊಲೆ ಮಾಡಿ, ತಲೆ ಮರೆಸಿಕೊಂಡಿದ್ದರು. ಆದರೆ, ಕಂಪ್ಲಿ ಠಾಣೆಯಲ್ಲಿ ಸಂಬಂಧಿಕರಾದ ಚನ್ನಬಸಪ್ಪ ಇವರು ದೂರು ನೀಡಿದ ಹಿನ್ನಲೆ ನಂತರ ಎಸ್ಪಿ ಡಾ. ಶೋಭಾ ರಾಣಿ ಅವರ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಪಿ. ರವಿಕುಮಾರ ಅವರ ಮುಂದಾಳತ್ವದಲ್ಲಿ ತಂಡ ರಚಿಸಿ, ಕಂಪ್ಲಿ ನಗರದ ಆರೋಪಿ ರಾಜಶೇಖರ(19) ಮತ್ತು ಪ್ರಾಯ ಬಾಲಕನನ್ನು ಬಂಧಿಸಿದ್ದಾರೆ.
ಡಿವೈಎಸ್‌ಪಿ ಪ್ರಸಾದ್ ಗೋಖುಲೆ, ಪಿಐ ಕೆ.ಬಿ.ವಾಸುಕುಮಾರ, ಪಿಎಸ್‌ಐ ಅವಿನಾಶ ಕಾಂಬ್ಳೆ, ಎಎಸ್‌ಐ ಬಸವರಾಜ, ಸಿಬ್ಬಂದಿಗಳಾದ ಬಸವರಾಜ ಹಿರೇಮಠ, ರಮೇಶ, ಮಲ್ಲೇಶ ರಾಥೋಡ್, ಸತ್ಯನಾರಾಯಣ, ಸುರೇಶ, ಮುತ್ತುರಾಜ್, ಗಾದಿಲಿಂಗಪ್ಪ, ವಿಶ್ವನಾಥ, ಪ್ರಭಾಕರ, ತಿಮ್ಮಯ್ಯ ಇವರು ಆರೋಪಿಗಳನ್ನು ಪತ್ತೆ ಹಚ್ಚುವ ಮೂಲಕ ಯಶಸ್ವಿಯಾಗಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!