
ಬಳ್ಳಾರಿ / ಎಮ್ಮಿಗನೂರು : ವಿಶ್ವ ‘ತಂಬಾಕು ವಿರೋಧಿ’. ತಂಬಾಕು ಸೇವನೆಯು ಮನುಷ್ಯನ ಮೇಲೆ ಉಂಟುಮಾಡುವ ದುಷ್ಪರಿಣಾಮಗಳನ್ನು ಯುವ ಸಮುದಾಯಕ್ಕೆ ಮನಮುಟ್ಟುವಂತೆ ತಿಳಿಸಿ ಹೇಳಬೇಕಾಗಿರುವುದು ಇಂದಿನ ಅಗತ್ಯವಾಗಿದೆ. ತಂಬಾಕು ಸೇವನೆಯಿಂದ ಯುವ ಪೀಳಿಗೆಯನ್ನು ರಕ್ಷಿಸುವುದು ಹೇಗೆ ಎಂಬ ಬಗ್ಗೆ ಯೋಜನೆಗಳನ್ನು ರೂಪಿಸುವುದರ ಜತೆಗೆ ಅವರಲ್ಲಿ ಈ ಬಗ್ಗೆ ಅರಿವು ಮೂಡಿಸಿ, ತಂಬಾಕು ನಿಯಂತ್ರಣದ ವಿಚಾರದಲ್ಲಿ ನೂತನ ಯೋಜನೆಗಳನ್ನು ಕಾರ್ಯಕ್ರಮವನ್ನು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B C ಟ್ರಸ್ಟ್ ಸಂಸ್ಥೆಯ ಹಮ್ಮಿಕೊಂಡಿತ್ತು.
ಕಂಪ್ಲಿ ತಾಲೂಕಿನ ಎಮ್ಮಿಗನೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B C ಟ್ರಸ್ಟ್ ಸಂಸ್ಥೆಯ ಕಂಪ್ಲಿ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ರಾಘವೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿ ‘ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು. ತಾಯಂದಿರು ಮನಸ್ಸು ಮಾಡಿದರೆ ಮಕ್ಕಳು ದುಶ್ಚಟಗಳಿಗೆ ಬಲಿಯಾಗುವುದನ್ನು ತಡೆಗಟ್ಟಲು ಸಾಧ್ಯ’ ಎಂದು ತಿಳಿಸಿ ವಿವಿಧ ಯೋಜನೆಗಳಾದ ವಿವಿಧ ಸೌಲಭ್ಯಗಳಡಿಯಲ್ಲಿ ಸುಜ್ಞಾನ ನಿಧಿ, ಶಿಷ್ಯವೇತನ, ವಿದ್ಯಾರ್ಥಿಗಳು ITI, ಡಿಪ್ಲೋಮಾ, ಇಂಜಿನಿಯರಿಂಗ್, ನರ್ಸಿಂಗ್, ಟಿ.ಸಿ.ಎಚ್, ಎಲ್ ಎಲ್ ಬಿ, ಈ ರೀತಿಯ ಇನ್ನೂ ಹಲವು 3 ವರ್ಷದ ಕೋರ್ಸ್ ಗಳಿಗೆ ಪ್ರತಿ ತಿಂಗಳು 400/- ರಂತೆ 5 ವರ್ಷದ ವೃತ್ತಿಪರ ಕೋರ್ಸ್ ಗಳಿಗೆ ಪ್ರತಿ ತಿಂಗಳು 1000/- ರಂತೆ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುತ್ತಿರುವ ಬಗ್ಗೆ,ಮತ್ತು ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರನ್ನು ನೀಡುತ್ತಿರುವ ಬಗ್ಗೆ ಶಾಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಆಟೋಪಕರಣ ಮತ್ತು ಪೀಠೋಪಕರಣ ನೀಡಲು ವ್ಯವಸ್ಥೆಗಳು ಇರುವ ಬಗ್ಗೆ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಶಿಕ್ಷಕರಾದ ರಾಮು ವಹಿಸಿಕೊಂಡು ಮಾತನಾಡಿ ಕಾಲೇಜು ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಬಗ್ಗೆ ಉಪಯುಕ್ತವಾದ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ರಾಧಾ ವಹಿಸಿಕೊಂಡಿದ್ದರು ಮುಖ್ಯ ಅತಿಥಿಗಳಾಗಿ ಎಮ್ಮಿಗನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಂರಕ್ಷಣಾಧಿಕಾರಿಗಳಾದ ಗೀತಾ ಹಾಗೂ ತಾಲೂಕು ಹಸಿರು ಸೇನೆ ರೈತ ಸಂಘದ ಅಧ್ಯಕ್ಷರಾದ ವೀರೇಶ್ V . ಅವರು ಮತ್ತು ಒಕ್ಕೂಟದ ಅಧ್ಯಕ್ಷರಾದ ಹನುಮವ್ವ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯ ತಾಲೂಕಿನ ಕೃಷಿ ಅಧಿಕಾರಿಗಳಾದ ಸಂಜುಕುಮಾರ್, ವಲಯದ ಮೇಲ್ವಿಚಾರಕರಾದ ಮಂಜುನಾಥ, ಸೇವಾಪ್ರತಿನಿಧಿಗಳಾದ ಲಕ್ಷ್ಮಿ, ಶಾಹಿದಾ, CSC ಸೇವಾದಾರರಾದ ಶಶಿಕುಮಾರ್, ಶಿಕ್ಷಣ ಸಂಸ್ಥೆಯ ಸಹ ಶಿಕ್ಷಕರು, ಮತ್ತು ಕಾಲೇಜ್ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ಕಾರ್ಯಕ್ರಮ ನಡೆಸಲಾಯಿತು. ಶಾಲಾ ಮಕ್ಕಳು ತಂಬಾಕು ಸೇವನೆ ಮಾಡದೇ ಇರುವ ಬಗ್ಗೆ ಎಲ್ಲರಿಗೂ ಒಂದು ಪ್ರತಿಜ್ಞಾವಿಧಿ ಬೋಧಿಸಲಾಯಿತು.
ವರದಿ : ಜಿಲಾನಸಾಬ್ ಬಡಿಗೇರ್



















