ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗ್ರಾಮದ ಮುಖಂಡರಿಂದ ಶಾಸಕರಿಗೆ ಮನವಿ

ಚಾಮರಾಜನಗರ /ಹನೂರು : ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆ ಮತ್ತು ಗ್ರಂಥಾಲಯ ನಿರ್ಮಾಣ ಮಾಡಲು ಸಹಾಯ ಧನ ನೀಡುವಂತೆ ಶಾಸಕ ಎಂ. ಆರ್. ಮಂಜುನಾಥ್ ಅವರಿಗೆ ಬಂಡಳ್ಳಿ ಗ್ರಾಮದ ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆ ಮತ್ತು ಗ್ರಂಥಾಲಯ ನಿರ್ಮಾಣ ಸಮಿತಿಯವರು ಮನವಿ ಪತ್ರ ಸಲ್ಲಿಸಿದರು.

ಹನೂರು :ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ
ಡಾ.ಬಿ.ಆರ್ ಅಂಬೇಡ್ಕರ್ ನಗರದಲ್ಲಿ ಕುಲಸ್ಥರೆಲ್ಲ ಸೇರಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ಮತ್ತು ಗ್ರಂಥಾಲಯ ನಿರ್ಮಾಣ ಮಾಡಬೇಕು ಎಂದು ಈಗಾಗಲೇ ತೀರ್ಮಾನಿಸಲಾಗಿದೆ. ಈ ಎರಡು ಕಾರ್ಯಕ್ಕೆ ಸುಮಾರು 50 ಲಕ್ಷ ವೆಚ್ಚ ತಗುಲಬಹುದು ಎಂದು ಅಂದಾಜಿಸಲಾಗಿದೆ. ಹೀಗಾಗಿ ಮನೆ ಮನೆ ಸರದಿ ಮೂಲಕ 10ಲಕ್ಷ ರೂ. ಸಂಗ್ರಹ ಮಾಡುವ ಕೆಲಸ ಆರಂಭವಾಗಿದೆ. ಉಳಿದ ಹಣ ಸಂಗ್ರಹಕ್ಕಾಗಿ ತಾವು ಸಹಾಯ ಧನ ನೀಡಬೇಕು ಎಂದು ಬಂಡಳ್ಳಿ ಗ್ರಾಮದ ಮುಖಂಡರು ಶಾಸಕರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಶಾಸಕ ಎಂಆರ್. ಮಂಜುನಾಥ್ ಪ್ರತಿಕ್ರಿಯಿಸಿ, ಡಾ.ಬಿ. ಆರ್. ಅಂಬೇಡ್ಕರ್ ಅವರು ಜ್ಞಾನದ ಬೆಳಕು ಸಂವಿಧಾನ ಮೂಲಕ ಹಕ್ಕು ಅಧಿಕಾರ ಕೊಡಿಸಿದ ಮಹಾನ್ ಚೇತನರು. ಇಂತವರ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿರುವುದು ಸಂತಸ ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಎಲ್ಲರ ಮೈಗೂಡಿಸಿ ಕೊಳ್ಳಬೇಕು ಎಂದು ಮನವಿ ಪತ್ರ ಸ್ವೀಕಾರ ಮಾಡಿದರು. ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು ಅಂದರೆ ಅದು ಅಂಬೇಡ್ಕರ್ ಬರೆದಿರುವ ಸಂವಿಧಾನದಿಂದ ಮಾತ್ರ ಸಾಧ್ಯ ಎಂದು ಇದೆ ವೇಳೆ ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಮುಖಂಡರಾದ ತಮ್ಮಯ್ಯ, ಶಿವಸ್ವಾಮಿ, ಮುನಿಸ್ವಾಮಿ, ಶಿವಣ್ಣ, ಕುಮಾರ, ಮಂಟೆಸ್ವಾಮಿ, ಶಿವಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!