ಚಾಮರಾಜನಗರ /ಕೊಳ್ಳೇಗಾಲ : ಶ್ರೀ ಬೀರೇಶ್ವರ ಸಮುದಾಯ ಭವನದ ಮುಂದುವರೆದ ಕಾಮಗಾರಿಯನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಚಾಲನೆ ನೀಡಿದರು.
ಪಟ್ಟಣದ ಹಳೇ ಕುರುಬರ ಬೀದಿಯಲ್ಲಿ ಕಾಮಗಾರಿಗೆ ಶಾಸಕರು ಗುದ್ದಲಿ ಪೂಜೆ ನಡೆಸಿ ಬಳಿಕ ಮಾತನಾಡಿದರು.
ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಆರ್. ಧ್ರುವನಾರಾಯಣ ಅವರ ಶಿಫಾರಸ್ಸಿನ ಮೇರೆಗೆ ಕೊಳ್ಳೇಗಾಲ ಪಟ್ಟಣದಲ್ಲಿ ಬೀರೇಶ್ವರ ಭವನ ನಿರ್ಮಾಣಕ್ಕೆ 1 ಕೋಟಿ ಅನುದಾನ ನೀಡಿದ್ದರು ಎಂದು ತಿಳಿಸಿದರು. ಭವನ ನಿರ್ಮಾಣ ಮುಂದುವರಿದ ಕಾಮಗಾರಿಗೆ ನಾನು 50 ಲಕ್ಷ ಅನುದಾನ ನೀಡಿದ್ದು ಈ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಉತ್ತಮವಾಗಿ ಭವನ ನಿರ್ಮಾಣ ಮಾಡಿಕೊಳ್ಳಬೇಕು. ಜೊತೆಗೆ ಭವನ ನಿರ್ವಹಣೆ ಕೂಡ ಉತ್ತಮವಾಗಿ ಆಗಬೇಕು ಎಂದು ಸಲಹೆ ನೀಡಿದರು.
ಈ ಸಂಧರ್ಭದಲ್ಲಿ ನಗರಸಭೆ ಅಧ್ಯಕ್ಷರು ರೇಖಾ, ವಾರ್ಡ್ ಸದಸ್ಯರು ಮಾನಸ ಪ್ರಭುಸ್ವಾಮಿ, ಸದಸ್ಯರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧ್ಯಕ್ಷ ಚಂದ್ರು, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ತೋಟೇಶ್, ಕಾರ್ಯದರ್ಶಿ ಬಸ್ತೀಪುರ ರವಿ, ಕುರುಬರ ಸಂಘದ ಜಿಲ್ಲಾಧ್ಯಕ್ಷ ನಂಜೇಗೌಡ, ತಾಲ್ಲೂಕು ನಿರ್ದೇಶಕರು ಶಶಿಕುಮಾರ್, ಯಜಮಾನರು ಮಹದೇವ, ದೊಳ್ಳೇಗೌಡ, ಸುರೇಶ್, ಪುಟ್ಟಮಾದು ಹಾಗೂ ಇತರರು ಇದ್ದರು.
ವರದಿ ಉಸ್ಮಾನ್ ಖಾನ್



















