ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಶೇಷ ಚೇತನರಿಗೆ 1.22 ಲಕ್ಷ ಮೌಲ್ಯದ ಸಲಕರಣೆ ವಿತರಣೆ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದೇಶನೂರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ವತಿಯಿಂದ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಶೇಷ ಚೇತನರಿಗೆ ಮಂಜೂರುಗೊಂಡ 1.22 ಲಕ್ಷ ಮೌಲ್ಯದ ಸಲಕರಣೆಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ವಿತರಿಸಿದರು.

ನಂತರ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಅದರಲ್ಲೂ ವಿಶೇಷವಾಗಿ ವಿಶೇಷ ಚೇತನರಿಗೆ ಜಲಮಂಗಲ ಕಾರ್ಯಕ್ರಮದಡಿ ವೀಲ್ ಚೇರ್, ಕಮೋಡ್ ಚೇರ್, ಯು ಸೇಫ್ ವಾಕರ್, ತ್ರೀ ಲೆಗ್ ಸ್ಟಿಕ್, ಸಿಂಗಲ್ ಲೆಗ್ ಸ್ಟಿಕ್, ವಾಟರ್ ಬೆಡ್ ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು, ತಾಲೂಕಿನಲ್ಲಿ ಈವರೆಗೆ 34 ಲಕ್ಷ ಮೌಲ್ಯದ ಸಲಕರಣೆಗಳನ್ನು ವಿತರಿಸಲಾಗಿದೆ ಎಂದರು.

ಈ ಸಂದರ್ಭ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳಾದ ಸುಧೀರ್ ಹಂಗಳೂರು, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಭೀಮಪ್ಪ ಮತ್ತು ಸದಸ್ಯರಾದ ಈಶ್ವರ್, ಕೃಷಿ ಮೇಲ್ವಿಚಾರಕ ವೀರೇಶ್, ವಲಯ ಮೇಲ್ವಿಚಾರಕಿ ಶ್ರೀಮತಿ ಚಂದ್ರಕಲಾ ಸೇವಾ ಪ್ರತಿನಿಧಿಗಳಾದ ಶ್ರೀಮತಿ ನಿಂಗಮ್ಮ, ಶ್ರೀಮತಿ ಲಲಿತ, ಶ್ರೀಮತಿ ಅನಿತಾ ಹಾಗೂ ಊರಿನ ಗಣ್ಯರು ಸಂಘದ ಸದಸ್ಯರು ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!