ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೂ.29 ರಂದು ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಭಾಜನರಾದ ಸಿರಗಾಪೂರ ಅವರ ಅಭಿನಂದನಾ ಸಮಾರಂಭ

ಕಲಬುರಗಿ: ಇತ್ತೀಚೆಗೆ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಭಾಜನರಾದ ಹೋರಾಟಗಾರ ಲಿಂಗರಾಜ ಸಿರಗಾಪೂರ ಅವರ ಅಭಿನಂದನಾ ಸಮಾರಂಭವನ್ನು ವಿವಿಧ ಸಂಘಟನೆಗಳ ಹಾಗೂ ಗೆಳೆಯರ ಬಳಗದ ವತಿಯಿಂದ ಜೂ.29 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ವಕ್ತಾರ ಆನಂದ ತೆಗನೂರ ತಿಳಿಸಿದ್ದಾರೆ.
ನಗರದ ಖರ್ಗೆ ವೃತ್ತ ಸಮೀಪದ ಪೂರ್ಣಾನಂದ ಫಂಕ್ಷನ್ ಸಭಾಂಗಣದಲ್ಲಿ ನಡೆಯವ ಸಮಾರಂಭದ ಸಾನ್ನಿಧ್ಯವನ್ನು ಶ್ರೀನಿವಾಸ ಸರಡಗಿ ಸಂಸ್ಥಾನ ಹಿರೇಮಠದ ಪೂಜ್ಯ ಶ್ರೀ ರೇವಣಸಿದ್ಧ ಶಿವಾಚಾರ್ಯರು ವಹಿಸಲಿದ್ದಾರೆ. ಶಾಸಕ ಅಲ್ಲಮಪ್ರಭು ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಶಶೀಲ ನಮೋಶಿ, ಬಿ.ಜಿ.ಪಾಟೀಲ, ಗುವಿವಿಯ‌ ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾದ ಪ್ರೊ.ಎಚ್.ಟಿ.ಪೋತೆ, ಹಿರಿಯ ಹೋರಾಟಗಾರ ಡಾ.ಲಕ್ಷ್ಮಣ ದಸ್ತಿ, ಹಿರಿಯ ಸಾಹಿತಿ ಎ.ಕೆ.ರಾಮೇಶ್ವರ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ್ ಯಡ್ರಾಮಿ ಆಗಮಿಸಲಿದ್ದಾರೆ. ಚಿಂತಕ ಡಾ.ಬಸವರಾಜ ಕುಮ್ನೂರ, ಹೋರಾಟಗಾರ ಲಿಂಗರಾಜ ಸಿರಗಾಪೂರ, ಸಾಜೀದ್ಅಲಿ ರಂಜೋಳ್ವಿ, ಉಪಸ್ಥಿತರಿರುವರು.
ವಿವಿಧ ಸಂಘಟನೆಗಳ ಮುಖಂಡರು ಆಗಮಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಮುಖರನ್ನು ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!