ಬಳ್ಳಾರಿ / ಸಿರುಗುಪ್ಪ : ರೈತರೊಂದಿಗೆ ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ ಡಿ ಹ್ಯಾರೀಸ್ ಸುಮೇರ್ ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮಕ್ಕೆ ಮಾರ್ಗ ಮಧ್ಯ ಹೋಗುವಾಗ ಗದ್ದೆಯಲ್ಲಿ ಭತ್ತ ನಾಟಿ ಮಾಡುವುದನ್ನು ನೋಡಿದ ಐಎಎಸ್ ಅಧಿಕಾರಿ ಭತ್ತದ ಗದ್ದೆಗಿಳಿದು, ಸಸಿಗಳನ್ನು ನಾಟಿ ಮಾಡಿದ್ದಾರೆ.
ರೈತರೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಅಧಿಕಾರಿ, ಈ ಸಂದರ್ಭ ಮಾತನಾಡಿದ ಅವರು, ಹಳೆಯ ಕೃಷಿ ಪದ್ಧತಿಯನ್ನು ಬಿಟ್ಟು ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. ಕೃಷಿ ಸಂಬಂಧಿ ಅನೇಕ ಸರಳ ಯಂತ್ರಗಳು ಲಭ್ಯವಿದ್ದು, ಅವುಗಳನ್ನು ಬಳಸುವ ಮೂಲಕ ಸಮಯವನ್ನು ಉಳಿಸಿಕೊಳ್ಳಬಹುದು ಮತ್ತು ಹೆಚ್ಚು ಆದಾಯವನ್ನು ಪಡೆಯಬಹುದು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















