ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯೋಗದಿಂದ ಮನುಷ್ಯನನ್ನು ಮಾನಸಿಕ ಮತ್ತು ದೈಹಿಕವಾಗಿ ಸದೃಡವಾಗಿಸಬಹುದು : ಹೊನ್ನೂರವಲಿ ಸಾಬ್

ಬಳ್ಳಾರಿ / ಕಂಪ್ಲಿ : ಯೋಗದಿಂದ ಮನುಷ್ಯನನ್ನು ಮಾನಸಿಕ ಮತ್ತು ದೈಹಿಕವಾಗಿ ಸದೃಡವಾಗಿಸಬಹುದು
ಎಂದು ಗೃಹ ರಕ್ಷಕ ದಳದ ಘಟಕಾಧಿಕಾರಿ ಹೊನ್ನೂರವಲಿಸಾಬ್ ಹೇಳಿದರು. ಪಟ್ಟಣದ ಷಾಮೀಯಚಂದ ಪ್ರೌಢ ಶಾಲೆ ಮೈದಾನದಲ್ಲಿರುವ ಗೃಹ ರಕ್ಷಕ ದಳದ ಕಚೇರಿಯಲ್ಲಿ ವಿಶ್ವ ಯೋಗ ದಿನಾಚರಣೆಗೆ ಚಾಲನೆ ನೀಡಿ ನಂತರ ಮಾತನಾಡಿ ಒತ್ತಡ ಜೀವನದಲ್ಲಿ ಯೋಗ ಧ್ಯಾನ ಪ್ರಾಣಯಾಮ ಸರ್ವರೋಗಕ್ಕೆ ರಾಮಬಾಣವಾಗಿದೆ ಧ್ಯಾನ ಅವಶ್ಯಕ ಪ್ರತಿಯೊಬ್ಬರು ಯೋಗ ಧ್ಯಾನ ಅಳವಡಿಸಿಕೊಂಡಾಗ ನೆಮ್ಮದಿ ಜೀವನ ನೆಡಸಬಹುದು. ಯೋಗವು ಮನುಷ್ಯನ ದೈಹಿಕ ಮತ್ತು ಮಾನಸಿಕ ಹಾಗೂ ಆಧ್ಯಾತ್ಮಿಕವಾಗಿ ಆರೋಗ್ಯದ ಸರಳ ಸೂತ್ರವಾಗಿದೆ. ಯೋಗದಿಂದ ನೆಮ್ಮದಿ, ತೃಪ್ತಿ, ಸಂತೋಷ ಲಭಿಸಲಿದೆ. ಮಾನವ ಸರ್ವತೋಮುಖ ಅಭಿವೃದ್ಧಿಗಾಗಿ ಯೋಗದ ಅವಶ್ಯಕತೆ ಇದೆ ಎಂದರು. ಗೃಹರಕ್ಷಕ ದಳದ ಸಿಬ್ಬಂದಿಗಳು ಯೋಗಾಸನ ಮಾಡಿದರು.
ಈ ಸಂದರ್ಭದಲ್ಲಿ ಲೀಡರ್‌ಗಳಾದ ಕೆ.ಸುರೇಶ ಕೆ.ಜಗದೀಶ, ಬಿ.ಚಂದ್ರಶೇಖರ್ ಸೇರಿ ಅನೇಕ ಗೃಹ ರಕ್ಷಕ ದಳದ ಸಿಬ್ಬಂದಿಗಳಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!