ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು

ಕೊಪ್ಪಳ/ ಗಂಗಾವತಿ : ನಗರದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನ ಕಾಮಗಾರಿಯನ್ನು ಕಳಪೆಯಾಗಿ ನಿರ್ವಹಣೆ ಮಾಡಿದ್ದಕ್ಕೆ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಚೇತನ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನ ಕಾಮಗಾರಿಯನ್ನು ಕಳಪೆಯಾಗಿ ನಿರ್ವಹಣೆಗೆ ಸಂಬಂಧಿಸಿದಂತೆ ‌ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ಎಚ್‌. ಸತ್ಯಪ್ಪ ಮತ್ತು ಗಂಗಾವತಿ ಉಪವಿಭಾಗದ ಪ್ರಭಾರ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಪಿ. ವಿಜಯಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ.
ಕಾರ್ಯಾದೇಶದ ಅನ್ವಯ ಒಟ್ಟು 90 ಸಾಮಗ್ರಿಗಳನ್ನು ಕಾಲೇಜಿಗೆ ಪೂರೈಸಬೇಕಿತ್ತು. ಆದರೆ, ಕೇವಲ 82 ಸಾಮಗ್ರಿಗಳನ್ನು ಮಾತ್ರ ನೀಡಲಾಗಿದೆ. ಪ್ರಯೋಗಾಲಯಗಳಿಗೆ ಒದಗಿಸಿದ 47 ಯಂತ್ರೋಪಕರಣಗಳಲ್ಲಿ 18 ಉಪಕರಣಗಳಲ್ಲಿ ನ್ಯೂನ್ಯತೆಗಳು ಕಂಡುಬಂದಿವೆ. ನಿಯಮಗಳಿಗೆ ಅನುಗುಣವಾಗಿ ಅವುಗಳನ್ನು ಅಳವಡಿಸಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಎಂಜಿನಿಯರಿಂಗ್‌ ಕಾಲೇಜ್ ಪ್ರಯೋಗಾಲಯದ ಉಪಕರಣಗಳು, ಡಿಜಿಟಲ್‌ ಗ್ರಂಥಾಲಯ, ವಾಚನಾಲಯಕ್ಕೆ ಪೀಠೋಪಕರಣಗಳು, ಐದು ಕಂಪ್ಯೂಟರ್‌ಗಳು, ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ಇತರ ಕಾಮಗಾರಿಗಳನ್ನು ಇಲಾಖೆ ವತಿಯಿಂದ ಮಾಡಲಾಗಿತ್ತು. ಈ ಎಲ್ಲಾ ಕಾಮಗಾರಿಗಳನ್ನು ₹68.40 ಲಕ್ಷ ವೆಚ್ಚದಲ್ಲಿ ನಿರ್ವಹಿಸಲು ಅನುಮೋದನೆ ನೀಡಲಾಗಿತ್ತು. ಇವುಗಳಲ್ಲಿ ಲೋಪದ ಜತೆಗೆ ಅವ್ಯವಹಾರ ಕಂಡುಬಂದ ಹಿನ್ನೆಲೆಯಲ್ಲಿ ಇಬ್ಬರೂ ಅಧಿಕಾರಿಗಳನ್ನು
ಅಮಾನತುಗೊಳಿಸಿ ಇಲಾಖಾ ವಿಚಾರಣೆಗೆ ಒಳಪಡಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಚೇತನ ಆದೇಶದಲ್ಲಿ ತಿಳಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!