ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿವಿಧ ಬೇಡಿಕೆಗೆ ಆಗ್ರಹಿಸಿ, ಶಾಸಕರಿಗೆ ಮನವಿ ಪತ್ರ ಸಲ್ಲಿಕೆ

ಬಳ್ಳಾರಿ / ಕಂಪ್ಲಿ : ಖಾಸಗಿ ಶಾಲೆಗಳ ಅಧಿಕ ಶುಲ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ನೇಮಕ, ಬಸ್ ಡಿಪೋ, ರಾಮಸಾಗರದ ವಿಠಲಾಪುರ, ಗೌರಮ್ಮ ಕೆರೆ ಅಭಿವೃದ್ಧಿ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ, ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಜಿಲ್ಲಾ ಮತ್ತು ತಾಲೂಕು ಘಟಕದ ಪದಾಧಿಕಾರಿಗಳು ಪಟ್ಟಣದ ಹೊಸಪೇಟೆ ಬೈಪಾಸ್ ರಸ್ತೆಯಲ್ಲಿರುವ ಶಾಸಕರ ಕಛೇರಿಯಲ್ಲಿ ಶಾಸಕ ಗಣೇಶ ಇವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾಧ್ಯಕ್ಷ ಬಿ. ಗಂಗಾಧರ ಮತ್ತು ತಾಲೂಕಾಧ್ಯಕ್ಷ ಗುಬಾಜಿ ರಾಮಾಂಜಿನಿ ಮಾತನಾಡಿ, ಕಂಪ್ಲಿ ತಾಲೂಕಿನ ಖಾಸಗಿ ಶಾಲೆಯಲ್ಲಿ ಬಡ ಮಕ್ಕಳು ಮತ್ತು ರೈತರ ಮಕ್ಕಳು ಶಿಕ್ಷಣ ಪಡೆಯಲು ಕಷ್ಟಕರವಾಗಿದೆ. ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ಶಾಲಾ ಶುಲ್ಕ ಏರಿಕೆ ಮಾಡುತ್ತಾ, ಸರ್ಕಾರದ ಆದೇಶ ಮೀರಿ ಅಧಿಕ ಶುಲ್ಕ ಪಡೆದಿದ್ದಾರೆ. ಆದ್ದರಿಂದ ಸರ್ಕಾರ ಮತ್ತು ಸ್ಥಳೀಯ ಶಾಸಕರು ಖಾಸಗಿ ಹಾವಳಿಯ ಶುಲ್ಕಕ್ಕೆ ಕಠಿಣ ಕ್ರಮಕೈಗೊಳ್ಳಬೇಕು. ಕಂಪ್ಲಿ ತಾಲೂಕು ಮತ್ತು ಕ್ಷೇತ್ರವಾಗಿದ್ದು, ಇಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿ ಮತ್ತು ಶಿಕ್ಷಣಾಧಿಕಾರಿಯನ್ನು ಕೂಡಲೇ ನೇಮಕ ಮಾಡಬೇಕು. ಕಂಪ್ಲಿ ತಾಲೂಕಿನ ಸುತ್ತಮುತ್ತ ಗ್ರಾಮದ ವಿದ್ಯಾರ್ಥಿಗಳಿಗೆ ರೈತರಿಗೆ ಸಾರ್ವಜನಿಕರಿಗೆ ಕಂಪ್ಲಿಯಿಂದ ಬಳ್ಳಾರಿಗೆ ಹೋಗಿ ಬರಲು ಸಾರಿಗೆ ವ್ಯವಸ್ಥೆ ಸರಿಯಾಗಿ ಇರುವುದಿಲ್ಲ. ಮತ್ತು ವಿಜಯನಗರದಿಂದ ಕಂಪ್ಲಿಗೆ ಹೋಗಿ ಬರಲು ಸಾರಿಗೆ ವ್ಯವಸ್ಥೆ ಸರಿಯಾಗಿ ಇಲ್ಲ. ಇದರಿಂದ ತೊಂದರೆ ಆಗಿರುತ್ತದೆ. ಹಾಗಾಗಿ ಕಂಪ್ಲಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಸ್ಥಾಪಿಸಬೇಕು, ರಾಮಸಾಗರ ಗ್ರಾಮದ ವಿಠಲಾಪುರ ಕೆರೆ ಮತ್ತು ಗೌರಮ್ಮ ಕೆರೆಯನ್ನು ಅಭಿವೃದಿಪಡಿಸಬೇಕು. ಸುಮಾರು ವರ್ಷಗಳಿಂದ ಕೆರೆಗೆ ಯಾವುದೇ ರೀತಿಯ ಅನುದಾನ ಒದಗಿಸಿರುವುದಿಲ್ಲ. ಹಾಗಾಗಿ ಕೆರೆಗಳು ದುರಸ್ಥಿತಿಯಲಿವೆ, ಅದರಿಂದ ರೈತರಿಗೆ ಹಾಗೂ ಸಾರ್ವಜನಕರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಶಾಸಕರು ಈ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಎಸ್.ಎ.ಖಾದ್ರಿ, ಪದಾಧಿಕಾರಿಗಳಾದ ಸೀನಪ್ಪ, ಶಂಕರ್, ನೀಲಪ್ಪ, ರಾಘವೇಂದ್ರ, ಗೋವಿಂದಪ್ಪ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!