ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು -ಪಿ ಎಸ್ ಐ ಸುಷ್ಮಾ

ಶಿವಮೊಗ್ಗ / ತೀರ್ಥಹಳ್ಳಿ : ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗಳಿಗೆ ತುತ್ತಾಗಿ ತನ್ನ ಜೀವನವನ್ನೇ ಕಳೆದುಕೊಳುತ್ತಾನೆ ಹಾಗೂ ಆರ್ಥಿಕವಾಗಿ ದಿವಾಳಿ ಆಗುತ್ತಾನೆ ಇದರಿಂದ ಸಮಾಜ ಹಾಗೂ ಕುಟುಂಬದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಬೇಕು ಎಂದು ಪಿಎಸ್ಐ ಸುಷ್ಮಾ ಹೇಳಿದರು. ನಿನ್ನೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿ ವರ್ಷ ಜೂನ್ 26ರಂದು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನವನ್ನು ಆಚರಿಸಲಾಗುತ್ತದೆ ಇನ್ನು ಮೊಬೈಲ್ ಎಷ್ಟು ಪ್ರಯೋಜನವಾಗಿದೆಯೋ ಅಷ್ಟೇ ಅದರಿಂದ ದುಷ್ಪರಿಣಾಮವೂ ಇದೆ ವಿದ್ಯಾರ್ಥಿಗಳಾದ ನೀವು ಮೊಬೈಲ್ ಬಳಕೆ ಕಡಿಮೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳಿಗೆ ಪ್ರತಿಜ್ಞಾ ವಿಧಿ ಭೋಧಿಸಿದರು.

ವರದಿ: ಪ್ರಸಾದ್ ಹೆಚ್ ಬಿ, ತೀರ್ಥಹಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!